ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆ ನಡೆಸಿದರು.
ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಶನಿವಾರ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು
ಈ ವೇಳೆ ಮಾತನಾಡಿದ ಗ್ರಾಮಸ್ಥರು, ಎಲ್ಲ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಡಿಸಿ ಸರ್ಕಾರದ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಸೀಲ್ದಾರ ಪ್ರಕಾಶ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.ಗ್ರಾಮಸ್ಥರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ ಖಾತೆ ತೆರಯಬೇಕು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.