ಏಳು ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ

KannadaprabhaNewsNetwork |  
Published : Dec 16, 2023, 02:00 AM IST
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ನೇತೃತ್ವದಲ್ಲಿ ಸ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಬೆಳಗಾವಿ ಸುವರ್ಣವಿಧಾನ ಸೌಧದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಕೆ.ಕೆ.ಆರ್.ಡಿ.ಬಿ. ಕಲಬುರಗಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯಡಿ ಏಳು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ಯೋಜನೆಯ ಕಲಬುರಗಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮೈಕ್ರೋ ಮತ್ತು ಮ್ಯಾಕ್ರೋ ಅಡಿಯ ಏಳು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗೀಕಾರ ದೊರೆತಿದೆ.

2023-24ನೇ ಸಾಲಿನ ರು. 50878.48 ಲಕ್ಷಗಳ ಮೈಕ್ರೋ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಹಾಗೂ 2023-24ನೇ ಸಾಲಿನ ರು. 21805.06 ಲಕ್ಷಗಳ ಮ್ಯಾಕ್ರೋ ಅನುದಾನದ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಯಿತು. 2023-24ನೇ ಸಾಲಿನ ಮ್ಯಾಕ್ರೋ ಅನುದಾನದಲ್ಲಿ ಮಂಡಳಿಯಿಂದ ಸ್ವೀಕೃತವಾದ ರು.3047.76 ಲಕ್ಷಗಳ 04 ಕಾಮಗಾರಿಗಳಿಗೆ ಅಂಗೀಕಾರ ನೀಡಲಾಯಿತು. 2018-19ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಮ್ಯಾಕ್ರೋ ಅಡಿಯಲ್ಲಿ ಆರ್ಥಿಕವಾಗಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ಉಳಿತಾಯವಾದ ಅನುದಾನದಲ್ಲಿ ರು.360.97 ಲಕ್ಷಗಳ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

2018-19ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಮೈಕ್ರೋ ಅಡಿಯಲ್ಲಿ ಆರ್ಥಿಕವಾಗಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ಉಳಿತಾಯವಾದ ಅನುದಾನದಲ್ಲಿ ರು.2307.71 ಲಕ್ಷಗಳ ಅನುದಾನಕ್ಕೆ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಯಿತು. 2022-23ನೇ ಸಾಲಿನ ಮೆಗಾ ಮ್ಯಾಕ್ರೋ (ಬೃಹತ್) ಕ್ರಿಯಾ ಯೋಜನೆಯಲ್ಲಿ ಭೌತಿಕವಾಗಿ ಪ್ರಾರಂಭವಾಗದೇ ಇರುವ ಕಾಮಗಾರಿಗಳಲ್ಲಿ ಟೆಂಡರ ಆಗಿರುವ ಮತ್ತು ಟೆಂಡರ ಆಗದೇ ಇರುವ ಒಟ್ಟು 326 ಕಾಮಗಾರಿಗಳಿಗೆ ಸಮ್ಮತಿ ನೀಡಲಾಯಿತು.

ಸಭೆಯಲ್ಲಿ ಕಲಬುರಗಿ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಡಾ. ಅಜಯಸಿಂಗ್, ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಸುನೀಲ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ತಿಮ್ಮಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್, ಲೋಕೋಪಯೋಗಿ, ಕೆ.ಕೆ.ಆರ್.ಡಿ.ಬಿ. ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಕಲಬುರಗಿಯಿಂದ ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಸಣಸಗಿ ಹಾಗೂ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ