ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ

KannadaprabhaNewsNetwork |  
Published : Jan 24, 2025, 12:45 AM IST
ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ | Kannada Prabha

ಸಾರಾಂಶ

ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಭೂ- ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ ತಾಲೂಕಿನ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಗ್ರಾಮಗಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಭೂ- ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ ತಾಲೂಕಿನ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಗ್ರಾಮಗಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಾರೆ.

ಬೆಂಗಳೂರು- ಮೈಸೂರು ಎನ್‌ ಎಚ್ -275ರಲ್ಲಿ ಹೆಚ್ಚುವರಿ ರಸ್ತೆ ಸುರಕ್ಷತಾ ಕಾಮಗಾರಿಯಡಿ ಬಸ್ ತಂಗುದಾಣಗಳ ನಿರ್ಮಾಣಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಹೆದ್ದಾರಿ ಸಚಿವರು ಅನುಮೋದನೆ ನೀಡಿದ್ದಾರೆ.

ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರ ಸುರಕ್ಷತೆ, ಅನುಕೂಲಕ್ಕಾಗಿ ತಂಗುದಾಣಗಳನ್ನು ಮಂಜೂರು ಮಾಡಲಾಗಿದೆ. ಸ್ವಕ್ಷೇತ್ರದ ಅಭಿವೃದ್ಧಿಗೆ ತಾವು ಹೊಂದಿರುವ ಕಳಕಳಿಗೆ ಅಭಿನಂದನೆಗಳು ಎಂದು ನಿತಿನ್ ಗಡ್ಕರಿ ಅವರು ಕುಮಾರಸ್ವಾಮಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಢಕಲೆ ಗ್ರಾಮಗಳ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಬಸ್ ತಂಗುದಾಣಗಳ ಮಂಜೂರಾತಿ ಕೋರಿ ಕಳೆದ 2024ರ ಸೆಪ್ಟೆಂಬರ್ 19 ರಂದು ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಆದಷ್ಟು ಬೇಗ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದಿರುವ ಗಡ್ಕರಿ ಅವರು, ಹೆದ್ದಾರಿ ವ್ಯಾಪ್ತಿಯಲ್ಲಿ ಜನತೆಗೆ ಉತ್ತಮವಾದ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ಹೆದ್ದಾರಿ ಸುರಕ್ಷತೆ ಹಾಗೂ ಅಪಘಾತಗಳನ್ನು ಶೂನ್ಯ ಮಟ್ಟಕ್ಕೆ ಇಳಿಸುವ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ, ಹೆದ್ದಾರಿ ಇಲಾಖೆ ನಿರಂತರ ಪ್ರಯತ್ನ ಮಾಡುತ್ತಿದೆ. ಆ ಉದ್ದೇಶದಿಂದಲೇ ಹೆದ್ದಾರಿ ಆಸುಪಾಸಿನಲ್ಲಿ ಅಗತ್ಯ ಇರುವ ಕಡೆ ಬಸ್ ತಂಗುದಾಣ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ. ಬಸ್ ತಂಗುದಾಣಗಳನ್ನು ಮಂಜೂರು ಮಾಡಿರುವ ಸಾರಿಗೆ ಸಚಿವರಿಗೆ ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

PREV

Recommended Stories

ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ