ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ: ರಿಝ್ವಾನ್ ಅರ್ಷದ್

KannadaprabhaNewsNetwork |  
Published : Nov 02, 2026, 03:45 AM IST
ಸಚಿವ ರಿಝ್ವಾನ್ ಅರ್ಷದ್ ಉಡುಪಿಯನ್ನು ಸಂಪೂರ್ಣ ಸಾಕ್ಷರ ಜಿಲ್ಲೆಯಾಗಿ ಘೋಷಿಸಿದರು | Kannada Prabha

ಸಾರಾಂಶ

ನಮ್ಮ ರಾಜ್ಯಕ್ಕೆ ಕಡಲು ನಿಜವಾದ ಮತ್ತು ಅತಿದೊಡ್ಡ ಸಂಪತ್ತಾಗಿದ್ದು, ಇದರ ಸದ್ಬಳಕೆಗಾಗಿ ರಾಜ್ಯ ಸರ್ಕಾರ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದರು.

ಉಡುಪಿ: ನಮ್ಮ ರಾಜ್ಯಕ್ಕೆ ಕಡಲು ನಿಜವಾದ ಮತ್ತು ಅತಿದೊಡ್ಡ ಸಂಪತ್ತಾಗಿದ್ದು, ಇದರ ಸದ್ಬಳಕೆಗಾಗಿ ರಾಜ್ಯ ಸರ್ಕಾರ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದರು.ಭಾನುವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಜಿಲ್ಲಾ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದರು.

ಕಡಲ ಜೈವಿಕ ತಂತ್ರಜ್ಞಾನ ನೀತಿಯಡಿಯಲ್ಲಿ ಮಂಗಳ‍ೂರಿನ ಸರ್ಕಾರಿ ಮೀನುಗಾರಿಕಾ ಕಾಲೇಜಿನಲ್ಲಿ ಕರ್ನಾಟಕ ಮರೈನ್ ಟೆಕ್ನಾಲಜಿ ಮತ್ತು ಬ್ಲೂ ಎಕಾನಮಿ ಸಂಸ್ಥೆಯನ್ನು ಸ್ಥಾಪಸಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಯನ್ನು 60ರಿಂದ 200ಕ್ಕೆ ಏರಿಸಲು ನಿರ್ಧರಿಸಲಾಗಿದೆ ಎಂದರು.

ಕರಾವಳಿಗೆ ಪ್ರವಾಸಿಗರನ್ನು ಆಕರ್ಷಿಸುವ ಮತ್ತು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹಿಸುವ ಸಲುವಾಗಿ ‘ಕಲಾ ನಡಿಗೆ, ನಿಮ್ಮ ಬಳಿಗೆ’ ಎಂಬ ವಿನೂತನ ಯೋಜನೆಯನ್ನೂ ಆರಂಭಿಸಲಾಗಿದೆ ಎಂದು ಸಚಿವರು ಹೇಳಿದರು.

ತುಳ‍ುನಾಡಿನ ದೊಡ್ಡ ಭಾಗವಾಗಿರುವ ಉಡುಪಿಯು ಕನ್ನಡದ ಮಹಾನ್ ಪರಂಪರೆಗೆ ನೀಡಿರುವ ಕೊಡುಗೆ ಬಹಳ ದೊಡ್ಡದು, ಆದರೇ ಇಂತಹ ಭವ್ಯ ನೆಲದಲ್ಲಿ ಜನರ ನಡುವೆ ವಿಷ ಬೆರೆಸುವ ಪ್ರಯತ್ನಗಳು ನಡೆಯುತ್ತಿರುವುದು ನೋವಿನ ಸಂಗತಿ ಎಂದ ಸಚಿವರು, ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದಿರಬೇಕು, ಇಲ್ಲಿ ನಾವೆಲ್ಲರೂ ಭಾರತೀಯರು, ಕನ್ನಡಿಗರು ಎಂಬುದೇ ಮುಖ್ಯವೇ ಹೊರತು, ಜಾತಿ, ಮತ, ಪಂಥಗಳಲ್ಲ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಗಳ ಅಧ್ಯಕ್ಷ ಎಂ. ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸ್ಪಿ ಹರಿರಾಮ್ ಶಂಕರ್, ಜಿಪಂ ಸಿಇಓ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಮುಂತಾದವರಿದ್ದರು. ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.ರಾಜ್ಯದ ಮೊದಲ ಸಾಕ್ಷರ ಜಿಲ್ಲೆ ಉಡುಪಿ !ಇದೇ ಸಂದರ್ಭದಲ್ಲಿ ಸಚಿವರು ಶೇ.95.53 ಸಾಕ್ಷರತೆಯನ್ನು ಸಾಧಿಸಿರುವ ಉಡುಪಿ ಜಿಲ್ಲೆಯನ್ನು ‘ರಾಜ್ಯದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆ’ಯಾಗಿ ಘೋಷಿಸಿದರು ಮತ್ತು ನಗರ ಪ್ರದೇಶದ 9 ರಿಂದ 11ನೇ ತರಗತಿಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಪರಿಚಯಿಸುವ ‘ಗ್ರಾಮಾನುಭವ ಯೋಜನೆ’ಯನ್ನು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರ ಮಕ್ಕಳಿಗೆ ಹಳ್ಳಿ ಜೀವನ ಪರಿಚಯಿಸುವ ‘ಗ್ರಾಮಾನುಭವ’ಕ್ಕೆ ಚಾಲನೆ
ಕೊಡವಲ್ಯಾಂಡ್ ಭೌಗೋಳಿಕ- ರಾಜಕೀಯ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹ