ಮೈಸೂರು ಕಂಬಳಕ್ಕೆ ಅನುಮೋದನೆ: ಸಿಎಂಗೆ ಸಮಿತಿ ಸನ್ಮಾನ

KannadaprabhaNewsNetwork |  
Published : Jul 11, 2026, 01:15 AM IST
ಮುಖ್ಯಮಂತ್ರಿಗಳ ಸನ್ಮಾನಿಸಿದ ಕಂಬಳ ಸಮಿತಿ ಸದಸ್ಯರು | Kannada Prabha

ಸಾರಾಂಶ

ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಹೈಪವರ್ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಮೈಸೂರು ಸಂಸದ ಯದುವೀರ್ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳೂ ಸಭೆಯಲ್ಲಿ ಉಪಸ್ಥಿತರಿದ್ದರು. ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಸ್ಥಾನ ದೊರೆಯಲಿದೆ. ಸಭೆಯ ಬಳಿಕ, ದಸರಾದಲ್ಲಿ ಕಂಬಳಕ್ಕೆ ಅವಕಾಶ ಕಲ್ಪಿಸಿರುವುದಕ್ಕಾಗಿ ಜಿಲ್ಲಾ ಕಂಬಳ ಸಮಿತಿ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಪುತ್ತೂರು ಶಾಸಕ ಅಶೋಕ್‌ ರೈ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಪೇಟ ಇರಿಸಿ ಕಂಬಳದ ಬೆತ್ತ ನೀಡಿ ಗೌರವಿಸಿದರು.ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಅಶೋಕ್ ರೈ, ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಸರ್ಕಾರ ತೀರ್ಮಾನ ಕೈಗೊಂಡಿರುವುದು ತುಳುನಾಡಿನ ಜನಪದ ಕ್ರೀಡೆಗೆ ಮತ್ತಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಚಾರ ದೊರಕಲು ಸಹಕಾರಿಯಾಗಲಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಭಾಷಿ ಬದ್ಕ್ ವಿಶ್ವಪ್ರಸಿದ್ಧಿ: ಜ್ಯೋತಿ ಉದಯಕುಮಾರ್
ಅಡಕೆ ಸಾಗಾಟಕ್ಕೆ ಅಡ್ಡಿ : ಮಹಾ ಸಿಎಂ ಜೊತೆ ಸಭೆ