ಕಾಂಗ್ರೆಸ್‌ಗೆ ಎ.ಆರ್.ಬೆಳಗಲಿ ಮರು ಸೇರ್ಪಡೆ

KannadaprabhaNewsNetwork |  
Published : Apr 04, 2024, 01:00 AM IST
ಮಹಾಲಿಂಗಪುರದ ಡಾ|| ಎ. ಆರ್. ಬೆಳಗಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ. | Kannada Prabha

ಸಾರಾಂಶ

ಈ ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲರು ಭಾರೀ ಬಹುಮತದಿಂದ ಆಯ್ಕೆಯಾಗುತ್ತಾರೆ.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ತೇರದಾಳ ಮತಕ್ಷೇತ್ರದ ಹಿರಿಯ ಧುರೀಣ, ಮಹಾಲಿಂಗಪುರದ ಖ್ಯಾತ ವೈದ್ಯ ಡಾ.ಎ.ಆರ್‌.ಬೆಳಗಲಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಮರು ಸೇರ್ಪಡೆಯಾದರು.

ಬುಧವಾರ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರನ್ನು ಸ್ವಾಗತಿಸಲಾಯಿತು. ಸಚಿವರಾದ ಶಿವಾನಂದ ಪಾಟೀಲ, ಆರ್‌.ಬಿ.ತಿಮ್ಮಾಪೂರ, ಶಾಸಕರಾದ ಎಚ್.ವೈ.ಮೇಟಿ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಜೆ.ಟಿ.ಪಾಟೀಲ, ಮಾಜಿ ಶಾಸಕರಾದ ಆನಂದ ನ್ಯಾಮಗೌಡ, ಎಸ್.ಆರ್‌.ಪಾಟೀಲ, ಅಜಯಕುಮಾರ ಸರನಾಯಕ, ಸಿದ್ದು ಕೊಣ್ಣೂರ ಹಾಗೂ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಈ ಸಂದರ್ಭದಲ್ಲಿ ಇದ್ದರು.

ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಬೆಳಗಲಿ, ಈ ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲರು ಭಾರೀ ಬಹುಮತದಿಂದ ಆಯ್ಕೆಯಾಗುತ್ತಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಹಗಲಿರುಳು ಶ್ರಮಿಸುತ್ತೇವೆ ಎಂದು ನುಡಿದರು.

ಬೆಳಗಲಿಯ ಕಾಂಗ್ರೆಸ್‌ ಸೇರ್ಪಡೆಯನ್ನು ತೇರದಾಳ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಮುಖ ಪರಪ್ಪ ಉರಭಿನವರ, ಸಂಗಪ್ಪ ಕುಂದಗೋಳ, ಮಹಾನಿಂಗ ಹೊಸಕೋಟಿ, ಅಡಿವೆಪ್ಪ ಬಾವಲತ್ತಿ, ಮಹಾದೇವ ಭಸ್ಮೆ, ಶಿವಯೋಗಿ ಕೊಳಕಿ, ಪರಪ್ಪ ದೊಡಮನಿ, ಸದಾಶಿವ ಮೇಲಗಿರಿ ಮೇಲಗಿರಿ, ಚನ್ನಪ್ಪ ಹಾದಿಮನಿ ಸೇರಿದಂತೆ ಮುಂತಾದವರು ಸ್ವಾಗತಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ : ಶ್ರೀ ಶ್ರೀ
ಒಳಮೀಸಲು ಹೆಚ್ಚಳ: ಸಿದ್ದು vs ಬೆಲ್ಲದ್‌ ಜಟಾಪಟಿ