ನ.1ರಿಂದ ರಾಜ್ಯಾದ್ಯಂತ ‘ಅರಾಜಕತೆ ಹಠಾವೋ’ ಅಭಿಯಾನ:ಸುನೀಲ್ ಕುಮಾರ್

KannadaprabhaNewsNetwork |  
Published : Oct 30, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಕಾಂಗ್ರೆಸ್‌ ಪಕ್ಷ ಸುಳ್ಳು ಮಾಹಿತಿ ಹರಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಹೋರಾಟದ ನೆಪದಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ನ.1ರಿಂದ ಒಂದು ತಿಂಗಳ ಕಾಲ ರಾಜ್ಯಾದ್ಯಂತ ‘ಅರಾಜಕತೆ ಹಠಾವೋ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ವಿ.ಸುನೀಲ್ ಕುಮಾರ್ ತಿಳಿಸಿದರು.

ಎಸ್‌ಐಆರ್‌ ಬಗ್ಗೆ ರಾಹುಲ್ ಗಾಂಧಿ, ಮುಖಂಡರ ತಪ್ಪು ಮಾಹಿತಿ: ಆರೋಪ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಕಾಂಗ್ರೆಸ್‌ ಪಕ್ಷ ಸುಳ್ಳು ಮಾಹಿತಿ ಹರಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಹೋರಾಟದ ನೆಪದಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ನ.1ರಿಂದ ಒಂದು ತಿಂಗಳ ಕಾಲ ರಾಜ್ಯಾದ್ಯಂತ ‘ಅರಾಜಕತೆ ಹಠಾವೋ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ವಿ.ಸುನೀಲ್ ಕುಮಾರ್ ತಿಳಿಸಿದರು.ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎಸ್‌ಐಆರ್‌ ಪ್ರಕ್ರಿಯೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಮುಖಂಡರು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿ ಸಿದರು. ಚುನಾವಣೆ ಆಯೋಗ ಕಾಲಕಾಲಕ್ಕೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದ್ದರೂ, ಆಗ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಕಾಂಗ್ರೆಸ್‌ ಈಗ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.ಕಾಂಗ್ರೆಸ್ ಆಡಳಿತದಲ್ಲೇ 10 ಬಾರಿ ಎಸ್‌ಐಆರ್‌:

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಚುನಾವಣೆ ಆಯೋಗ ಒಟ್ಟು 12 ಬಾರಿ ಎಸ್‌ಐಆರ್‌ ನಡೆಸಿದ್ದು, ಈ ಪೈಕಿ 10 ಬಾರಿ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ನಡೆದಿದೆ ಎಂದು ಸುನೀಲ್ ಕುಮಾರ್ ಹೇಳಿದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಎಸ್‌ಐಆರ್‌ ಪ್ರಕ್ರಿಯೆ ಆರಂಭಿಸಲಾಗಿದೆ ಎಂಬ ರೀತಿಯಲ್ಲಿ ಕಾಂಗ್ರೆಸ್‌ ಅನುಮಾನ ಮೂಡಿಸುತ್ತಿದೆ. ಆದರೆ, ಮತ ದಾರರ ಪಟ್ಟಿ ಪರಿಷ್ಕರಣೆ ಚುನಾವಣೆ ಆಯೋಗದ ನಿಯಮಿತ ಪ್ರಕ್ರಿಯೆ. ಅದನ್ನು ರಾಜಕೀಯ ವಿವಾದವನ್ನಾಗಿ ಮಾಡು ವುದು ಸರಿಯಲ್ಲ ಎಂದರು.ದೇಶದ ವಿವಿಧ ರಾಜ್ಯಗಳಲ್ಲಿ ಹಂತ ಹಂತವಾಗಿ ಎಸ್‌ಐಆರ್‌ ನಡೆಸಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಈ ಪ್ರಕ್ರಿಯೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋದಾಗ, ನ್ಯಾಯಾಲಯ ಚುನಾವಣೆ ಆಯೋಗದ ನಿಲುವು ಎತ್ತಿಹಿಡಿದಿದೆ ಎಂದು ತಿಳಿಸಿದರು. ಸಾಂವಿಧಾನಿಕ ಸಂಸ್ಥೆಯ ಕಾರ್ಯವಿಧಾನದ ಬಗ್ಗೆ ಆಧಾರರಹಿತ ಆರೋಪ ಮಾಡುವ ಮೂಲಕ ಕಾಂಗ್ರೆಸ್‌ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಟೀಕಿಸಿದರು.ಚುನಾವಣಾ ಸೋಲಿಗೆ ವ್ಯವಸ್ಥೆ ಮೇಲೆ ಆರೋಪ:

ಕಾಂಗ್ರೆಸ್‌ ಗೆ ಜನಾದೇಶದ ಮೇಲೆ ನಂಬಿಕೆ ಇಲ್ಲದಂತಾಗಿದೆ. ಚುನಾವಣೆಗಳಲ್ಲಿ ಗೆದ್ದಾಗ ಪ್ರಜಾಪ್ರಭುತ್ವದ ಗೆಲುವು ಎಂದು ಹೇಳುವ ಕಾಂಗ್ರೆಸ್‌, ಸೋತಾಗ ಮತಗಳ್ಳತನದ ಆರೋಪ ಮಾಡುತ್ತದೆ. ಹಿಂದೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದ ಪಕ್ಷ, ನಂತರ ಮತದಾರರ ಪಟ್ಟಿ ಬಗ್ಗೆ ಪ್ರಶ್ನೆ ಎತ್ತಿತು. ಈಗ ಎಸ್‌ಐಆರ್‌ ಪ್ರಕ್ರಿಯೆ ವಿರೋಧಿಸುತ್ತಿದೆ. ಇದೇ ಧೋರಣೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಮತದಾರರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಬಹುದು ಎಂದು ವ್ಯಂಗ್ಯವಾಡಿದರು.ದೇಶದ ಜನರಿಂದ ತಿರಸ್ಕೃತಗೊಂಡ ಕಾಂಗ್ರೆಸ್‌ನ ನಿಲುವು ಅಪ್ರಸ್ತುತವಾಗುತ್ತಿವೆ. ಸಂವಿಧಾನಬದ್ಧ ಪ್ರಕ್ರಿಯೆ ಪ್ರಶ್ನಿಸುವ ಮೂಲಕ ಚುನಾಯಿತ ಸರ್ಕಾರದ ಆಡಳಿತವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ನರೇಂದ್ರ ಮೋದಿ ಜನಾದೇಶದ ಮೂಲಕ ಮೂರು ಬಾರಿ ಪ್ರಧಾನಿಯಾಗಿದ್ದರೂ, ಅವರ ಆಡಳಿತ ಅಸ್ಥಿರಗೊಳಿಸುವ ಪ್ರಯತ್ನ ಕಾಂಗ್ರೆಸ್‌ ಮಾಡುತ್ತಿದೆ ಎಂದು ದೂರಿದರು.ರಾಹುಲ್ ಗಾಂಧಿ ಕುಟುಂಬದ ಹಿಂದಿನ ತಲೆಮಾರುಗಳು ಪ್ರಧಾನಿಯಾಗಿದ್ದ ಹಿನ್ನೆಲೆಯಲ್ಲಿ ತಾವೂ ಪ್ರಧಾನಿಯಾಗಬೇಕೆಂಬ ರಾಜಕೀಯ ಉದ್ದೇಶದಿಂದ ಕಾಂಗ್ರೆಸ್‌ ನಾಯಕರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ ಪಕ್ಷವು ಸಾಂವಿಧಾನಿಕ ಹುದ್ದೆಗಳಿಗೆ ಗೌರವ ನೀಡುತ್ತಿಲ್ಲ ಎಂದು ಟೀಕಿಸಿದ ಅವರು, ಪ್ರಧಾನಿ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದು ಹಾಗೂ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸುವಂತಹ ಕ್ರಮ ಉಲ್ಲೇಖಿಸಿದರು.ಕಾಲೇಜು ವಿದ್ಯಾರ್ಥಿಗಳಿಗೆ ಅರಿವು:‘ಅರಾಜಕತೆ ಹಠಾವೋ’ ಅಭಿಯಾನ ರಾಜ್ಯಾದ್ಯಂತ ನಡೆಯಲಿದ್ದು, ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಾಗೂ ತಾಲೂಕು ಮಟ್ಟದಲ್ಲಿ ಸಂವಾದ, ಗೋಷ್ಠಿಗಳನ್ನು ಆಯೋಜಿಸಲಾಗುವುದು. ವಿಶೇಷವಾಗಿ ಯುವಜನರು ಮತ್ತು ಕಾಲೇಜು ವಿದ್ಯಾರ್ಥಿ ಗಳಿಗೆ ಎಸ್‌ಐಆರ್‌ ಪ್ರಕ್ರಿಯೆ, ಚುನಾವಣೆ ಆಯೋಗದ ಕಾರ್ಯವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ಅರಿವು ಮೂಡಿಸಲಾಗುವುದು ಎಂದು ಸುನೀಲ್ ಕುಮಾರ್ ತಿಳಿಸಿದರು.

ಕಾಂಗ್ರೆಸ್‌ನ ಆರೋಪಗಳಿಗೆ ಜನರು ವಾಸ್ತವಾಂಶಗಳ ಆಧಾರದಲ್ಲಿ ಪ್ರತಿಕ್ರಿಯಿಸುವಂತೆ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶ ಎಂದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ರಾಜ್ಯ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ‌ ಕಲ್ಮಡಪ್ಪ, ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ್, ಮುಖಂಡರಾದ ಕೋಟೆ ರಂಗಣ್ಣ, ಚಿಕ್ಕಮಗಳೂರು ನಗರ ಬಿಜೆಪಿ ಅಧ್ಯಕ್ಷ ಪುಷ್ಪರಾಜ್, ರಾಜ್ಯ ಹಿಂದುಳಿದ ವರ್ಗದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ರಾಜಪ್ಪ, ಬಿಜೆಪಿ ವಕ್ತಾರ ಪುಟ್ಟಸ್ವಾಮಿ ಸೇರಿದಂತೆ‌ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು