ಅರಸು ಸಾಮಾಜಿಕ ನ್ಯಾಯದ ಹರಿಕಾರ

KannadaprabhaNewsNetwork |  
Published : Aug 21, 2024, 12:32 AM IST
20ಡಿಡಬ್ಲೂಡಿ5ಜಿಲ್ಲಾಡಳಿತವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಆಯೋಜಿಸಲಾದ ಡಿ. ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯುತು.  | Kannada Prabha

ಸಾರಾಂಶ

ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು.

ಧಾರವಾಡ:

ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಬಡವರ, ಹಿಂದುಳಿದವರ ಪರ ನಿಂತು ಸಾಮಾಜಿಕ ಮತ್ತು ಮೂಲಭೂತ ಅವಶ್ಯಕತೆ ಒದಗಿಸಿದವರು. ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದವರು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ಜಿಲ್ಲಾಡಳಿತವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಡಿ. ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಅವರು, ಅರಸು ಅವರಂತಹ ವ್ಯಕ್ತಿಗಳು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ನಾವು ಮಾಡುತ್ತಿರುವ ಕಾಯಕದ ಬಗ್ಗೆ ಕೀಳರಿಮೆ ಪಡಬಾರದು ಎಂದರು.ಡಿ. ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಶಶಿಧರ ತೋಡಕರ ಮಾತನಾಡಿ, ಸಾಮಾಜಿಕ ಬದಲಾವಣೆ, ಬಡತನ ನಿರ್ಮೂಲನೆ, ಮನೆಗಳ ನಿರ್ಮಾಣದಲ್ಲಿ ಅದ್ವಿತೀಯ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು. 70-80ರ ದಶಕದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾದ ನ್ಯಾಯ ಪ್ರತಿಕನೆಂಬ ಖ್ಯಾತಿಗೂ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ ಎಸ್, ದೇವರಾಜು ಅರಸು ಅವರ ಶೈಕ್ಷಣಿಕ ಜೀವನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಶಾಲ್, ನಾಮ ನಿರ್ದೇಶಿತ ಸದಸ್ಯ ಗುರುನಾಥ ಹುಲಗಾರ, ಅಲೆಮಾರಿ ಸಮುದಾಯದ ಮುಖಂಡ ರಾಜು ವೇಲಕರ, ಈಶ್ವರ ಬೆಳ್ಳಿಗಟ್ಟಿ ಇದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಗೋಪಾಲ ಲಮಾಣಿ ಪರಿಚಯ ಮಾಡಿದರು. ರವಿ ಕುಲಕರ್ಣಿ ನಿರೂಪಿಸಿದರು. ಗೀತಾ ಹೂಗಾರ ವಂದಿಸಿದರು.

PREV

Recommended Stories

ಬೆಳ್ತಂಗಡಿ: ಆಧಾರ್‌ ನೋಂದಣಿ, ತಿದ್ದುಪಡಿ ಶಿಬಿರ
ಲಾಯಿಲ ರಾಘವೇಂದ್ರ ಮಠ ಅಭಿವೃದ್ಧಿಗೆ 20 ಲಕ್ಷ ರು. ನೆರವು: ಶಾಸಕ ಗವಿಯಪ್ಪ ಭರವಸೆ