12ರಂದು ಅರಸು ಜಯಂತಿ, ವಿಚಾರ ಸಂಕಿರಣ: ವಿ.ರಾಜು

KannadaprabhaNewsNetwork |  
Published : Sep 11, 2026, 01:45 AM IST
ಪೋಟೋ: 10ಎಸ್‌ಎಂಜಿಕೆಪಿ04ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೊಷ್ಠಿಯಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು ಮಾತನಾಡಿದರು.  | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 111ನೇ ಜಯಂತಿ ಅಂಗವಾಗಿ ಸೆ.12ರಂದು ಬೆಳಿಗ್ಗೆ11ಕ್ಕೆ ನಗರದ ಆರ್.ಟಿ.ಒ. ಕಚೇರಿ ರಸ್ತೆಯ ಪತ್ರಿಕಾಭವನದಲ್ಲಿ ‘ಪುಷ್ಪನಮನ, ಪುಸ್ತಕ ಬಿಡುಗಡೆ ಹಾಗೂ ವಿಚಾರ ಸಂಕಿರಣ’ ಆಯೋಜಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 111ನೇ ಜಯಂತಿ ಅಂಗವಾಗಿ ಸೆ.12ರಂದು ಬೆಳಿಗ್ಗೆ11ಕ್ಕೆ ನಗರದ ಆರ್.ಟಿ.ಒ. ಕಚೇರಿ ರಸ್ತೆಯ ಪತ್ರಿಕಾಭವನದಲ್ಲಿ ‘ಪುಷ್ಪನಮನ, ಪುಸ್ತಕ ಬಿಡುಗಡೆ ಹಾಗೂ ವಿಚಾರ ಸಂಕಿರಣ’ ಆಯೋಜಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು ಹೇಳಿದರು.

ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟ, ಜಿಲ್ಲಾ ಹಿಂದುಳಿದ ಜನಜಾಗೃತಿ ವೇದಿಕೆ, ಎಸ್. ಸಿ. ಎಸ್. ಟಿ. ನೌಕರರ ಸಂಘ, ಅತಿ ಹಿಂದುಳಿದ ವರ್ಗಗಳ ಜನಜಾಗೃತಿ ವೇದಿಕೆ, ಮಿಲಿಂದ, ಜಮಾತೆ ಇಸ್ಲಾಂ (ಹಿಂದ್) ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್. ಐಎಎಸ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾ ಹಿಂದುಳಿದ ಜನಜಾಗೃತಿ ವೇದಿಕೆಯ ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ ಎಂದರು.

ಹಿಂದುಳಿದ ಜಾತಿಗಳ ಸವಾಲುಗಳು ಮತ್ತು ಪರಿಹಾರ’ ವಿಷಯ ಕುರಿತು ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಅಡ್ವಕೇಟ್ ಜನರಲ್ ಹಾಗೂ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮಕುಮಾರ್ ಉಪನ್ಯಾಸ ನೀಡಲಿದ್ದಾರೆ. ‘ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯ: ಸಾಧ್ಯಾಸಾಧ್ಯತೆಗಳು’ ಕುರಿತು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಪ್ರಾಧ್ಯಾಪಕ ಡಾ. ಆರ್.ವಿ. ಚಂದ್ರಶೇಖರ್ ಮಾತನಾಡಲಿದ್ದಾರೆ ಎಂದರು.ಅರಸು ಜೀವನ ಚರಿತ್ರೆ ಕೃತಿ ಬಿಡುಗಡೆ:

ಕಾರ್ಯಕ್ರಮದಲ್ಲಿ ‘ಡಿ. ದೇವರಾಜ ಅರಸು ಜೀವನ ಚರಿತ್ರೆ’ ಕೃತಿ ಬಿಡುಗಡೆಗೊಳ್ಳಲಿದೆ. ಮಾಜಿ ಶಾಸಕ ಆರ್.ಕೆ. ಸಿದ್ದರಾಮಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಎಸ್‌ಸಿ–ಎಸ್‌ಟಿ ನೌಕರರ ಸಂಘದ ಅಧ್ಯಕ್ಷ ಎಲ್. ಹನುಮನಾಯ್ಕ ಸೇರಿದಂತೆ ಗಣ್ಯರು ಭಾಗವಹಿಸುವರು ಎಂದರು.

ಸಾಹಿತಿ ಎಂ.ಎನ್. ಸುಂದರರಾಜ್, ಅತಿ ಹಿಂದುಳಿದ ವರ್ಗಗಳ ಜನಜಾಗೃತಿ ವೇದಿಕೆ ಅಧ್ಯಕ್ಷ ಆರ್. ಮೋಹನ್, ಸಮಾಜಸೇವಕಿ ಜ್ಯೋತಿ ಅರಳಪ್ಪ, ಕೃತಿಕಾರರಾದ ನಾಗರತ್ನ ಕುಮಾರ್, ಎಸ್.ವಿ. ರಾಜಮ್ಮ, ಪಿ.ಬಾಲಪ್ಪ, ಅಣ್ಣಪ್ಪ ಹಾಗೂ ವಹಾಬ್ ಉಪಸ್ಥಿತರಿರುವರು

ಪ್ರಮುಖರಾದ ಬಾಲಪ್ಪ, ವಿಜಯ ಕುಮಾರ್, ನಾಗರಾಜ್, ಡಿ. ಟಿ. ವೆಂಕಟೇಶ್, ನಾಗರತ್ನಮ್ಮ, ಸುಮಿತ್ರ ರಂಗನಾಥ ಇದ್ದರು.

-------------

ಪೋಟೋ: 10ಎಸ್‌ಎಂಜಿಕೆಪಿ04

ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೊಷ್ಠಿಯಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ವಿ.ರಾಜು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲುಷಿತ ನೀರು ಸೇವನೆ: ಮೊರಾರ್ಜಿ ವಸತಿ ಶಾಲೆಯ 43 ಮಕ್ಕಳು ಅಸ್ವಸ್ಥ
ಮಿಲಿಟರಿಯಿಂದ ಶಿಸ್ತು ಬದ್ದ ಜೀವನ ಸಾಧ್ಯ