ಕನ್ನಡಪ್ರಭ ವಾರ್ತೆ ತುಮಕೂರು
ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಪರಿವರ್ತನೆಯ ಹರಿಕಾರ ಎಂದೇ ಹೆಸರು ಪಡೆದಿದ್ದ ಅರಸು ಅವರ ರಾಜಕೀಯ ಜೀವನ ಸ್ಫೂರ್ತಿದಾಯಕವಾದದ್ದು. ಇಂತಹ ಮಹಾನ್ ವ್ಯಕ್ತಿಗಳನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ, ಅವರ ಸಾಧನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯುವಂತೆ ಮಾಡಬೇಕು ಎಂದು ಹೇಳಿದರು.
ಜಿಲ್ಲೆಗೆ ಹೇಮಾವತಿ ನೀರು ತರಲು 1960 ರಿಂದ ಹಲವು ಪ್ರಯತ್ನಗಳು ನಡೆದರೂ ಸಹ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ತುಮಕೂರಿನ ಬಗ್ಗೆ ಹೆಚ್ಚು ಆಸಕ್ತಿವಹಿಸಿ ಜಿಲ್ಲೆಗೆ ಹೇಮಾವತಿ ನೀರು ಹರಿಯುವಂತೆ ಮಾಡಿದ ಅವರನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.ನಂತರ ಮಾತನಾಡಿದ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ನ್ಯಾಯವನ್ನು ಒದಗಿಸಿಕೊಟ್ಟವರು ದೇವರಾಜು ಅರಸು ಅವರು. ಕರ್ನಾಟಕದಲ್ಲಿ ಭೂ-ಸುಧಾರಣೆ ಕಾಯ್ದೆಗಳು 1950 ರಿಂದ ಜಾರಿಗೆ ತಂದರೂ ಸಹ ಅವುಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಲಕ್ಷಾಂತರ ಹಿಂದುಳಿದ, ಬಡವ, ದಲಿತ ಸಮುದಾಯದ ಜನರ ಜೀವನವನ್ನು ಕಟ್ಟಿಕೊಟ್ಟಿದ್ದಾರೆ. ಇಂತಹ ಮೇರು ವ್ಯಕ್ತಿತ್ವದ ಅರಸು ಅವರನ್ನು ಒಂದು ದಿನ ನೆನೆದು ಸುಮ್ಮನಾಗದೇ ಸದಾ ನೆನೆಯಬೇಕು ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ೫ ಜನ ಸಮುದಾಯ ಮುಖಂಡರಾದ ಹೆಬ್ಬೂರು ಶ್ರೀನಿವಾಸ್, ಲಕ್ಷ್ಮೀಕಾಂತರಾಜು, ಗುರು ಪ್ರಸಾದ್, ಅಶ್ವಥ್ ನಾರಾಯಣ್, ಸಿ.ಎಸ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.