ಅರಸುರವರು ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕರು

KannadaprabhaNewsNetwork |  
Published : Aug 22, 2024, 12:50 AM IST
ಚಿತ್ರ 2 | Kannada Prabha

ಸಾರಾಂಶ

ಬಡವರ ಮತ್ತು ತುಳಿತಕ್ಕೊಳಗಾದವರ ಧ್ವನಿಯಾಗಿ ದೇವರಾಜ ಅರಸರು ಕೆಲಸ ಮಾಡಿದರು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅರಸುರವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು : ಬಡವರ ಮತ್ತು ತುಳಿತಕ್ಕೊಳಗಾದವರ ಧ್ವನಿಯಾಗಿ ದೇವರಾಜ ಅರಸರು ಕೆಲಸ ಮಾಡಿದರು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅರಸುರವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಅರಸುರವರ ಆಡಳಿತದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದವರ ಶಿಕ್ಷಣಕ್ಕೆ ಒತ್ತು ನೀಡಲಾಯಿತು. ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಹಾಸ್ಟೆಲ್ ಗಳನ್ನು ತೆರೆಯಲಾಯಿತು. ಅವರ ನೇತೃತ್ವದ ಭೂ ಸುಧಾರಣೆಗಳು ಶಾಶ್ವತವಾಗಿ ಉಳಿದವು. ಉಳುವವನೇ ಒಡೆಯ ಇಂದಿಗೂ ಮಾದರಿ ಯೋಜನೆಯಾಗಿದೆ. ಇದು ಶ್ರೀಮಂತರ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಿತು. ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಪ್ರಮುಖ ನಿರ್ಧಾರ ಇದಾಗಿತ್ತು. ನೀರಾವರಿ ಕ್ಷೇತ್ರದಲ್ಲೂ ಅರಸುರವರು ಗಣನೀಯ ಸೇವೆ ಮಾಡಿ, ರೈತ ಸಮುದಾಯಕ್ಕೆ ಅಪಾರ ನೆರವು ನೀಡಿದರು. ಅವರನ್ನು ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕ ಎಂದರೆ ತಪ್ಪಾಗಲಾರದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ವಾಸುದೇವ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ. ಶಿವಕುಮಾರ್, ಮುಖ್ಯ ಶಿಕ್ಷಕ ತಿಪ್ಪೇರುದ್ರಪ್ಪ, ಕಾಡುಗೊಲ್ಲ ಹೋರಾಟಗಾರ ತಿಮ್ಮಯ್ಯ, ಸವಿತಾ ಸಮಾಜದ ಮುಖಂಡ ಬಸವರಾಜು, ಈಶ್ವರಪ್ಪ, ವೀರಕರಿಯಪ್ಪ, ನಾಗರಾಜ್ ಹಾಗೂ ನಿಲಯ ಮೇಲ್ವಿಚಾರಕರು, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.

ಈ ವೇಳೆ 2023 24 ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಬಾಗಿಲಿಗೆ ಸಿಲುಕಿ ಬಾಲಕಿ ಬೆರಳು ಕಟ್‌ : ಕಸಕ್ಕೆಸೆದ ಶಿಕ್ಷಕರು-ಅಮಾನವೀಯ ವರ್ತನೆ!
ರಾಜ್ಯ ಕಾಂಗ್ರೆಸ್‌ ಸರ್ಕಾರದ 1000 ದಿನದ ಸಮಾವೇಶ ಇಂದು