ಚಂದ್ರಗುತ್ತಿ ಕೋಟೆ ಅಭಿವೃದ್ಧಿ ಕ್ರಮಕ್ಕೆ ಪುರಾತತ್ವ ಇಲಾಖೆ ನಿಯಮ ಅಡ್ಡಿ

KannadaprabhaNewsNetwork |  
Published : Dec 12, 2023, 12:45 AM IST
ಫೋಟೋ:೧೧ಕೆಪಿಸೊರಬ-೦೩ : ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬಾ ದೇವಸ್ಥಾನದ ಕೋಟೆಯನ್ನು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ವೀಕ್ಷಿಸಿ ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿದರು. | Kannada Prabha

ಸಾರಾಂಶ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸೊರಬ ಪಿಎಸ್‌ಐ ನಾಗರಾಜ್, ರಾಜು ರೆಡ್ಡಿ ಅಗಸೆ, ಅರಣ್ಯ ವಲಯ ಸಂರಕ್ಷಣಾಧಿಕಾರಿ ಯೋಗೇಶ್, ಶ್ರೀ ರೇಣುಕಾಂಬ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸೇರಿದಂತೆ ಕಂದಾಯ ಅಧಿಕಾರಿಗಳು ಹಾಜರಿದ್ದರು.

ಕನ್ನಡಪ್ರಭ ವಾರ್ತೆ ಸೊರಬ

ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಸ್ಥಾನದ ಕೋಟೆಯನ್ನು ಅಭಿವೃದ್ಧಿಪಡಿಸುವಂತೆ ಕೇಂದ್ರ ಪುರಾತತ್ವ ಇಲಾಖೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು.

ಭಾನುವಾರ ಸಂಜೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಸ್ಥಾನದ ಗುಡ್ಡದ ಮೇಲಿರುವ ಏಳು ಸುತ್ತಿನ ಕೋಟೆ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದರು.

ರಾಜ್ಯಾದ್ಯಂತ ಲಕ್ಷಾಂತರ ಭಕ್ತರನ್ನು ಹೊಂದಿರುವ ಶ್ರೀ ರೇಣುಕಾಂಬಾದೇವಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಗಮನ ನೀಡುವ ಜೊತೆಗೆ ಕೋಟೆಯ ಪ್ರಕೃತಿಗೆ ಧಕ್ಕೆ ಆಗದಂತೆ ಕ್ರಮಕೈಗೊಳ್ಳುವ ಅವಶ್ಯಕತೆ ಇದೆ. ಕದಂಬರ ಕಾಲದಲ್ಲಿ ಪ್ರಸಿದ್ಧಿ ಪಡೆದಂತಹ ಐತಿಹಾಸಿಕ ಕೋಟೆಯ ಸಂರಕ್ಷಣೆಗೆ ಸ್ಥಳೀಯ ಸಂಸ್ಥೆಗಳು ಮುಂದಾಗಲು ಪುರಾತತ್ವ ಇಲಾಖೆಯ ನಿಯಮಗಳು ಅಡ್ಡಿಯಾಗುತ್ತಿವೆ. ಈ ಕಾರಣದಿಂದ ಇಲಾಖೆ ಒಪ್ಪಿಗೆ ಪಡೆಯುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪುರಾತತ್ವ ಇಲಾಖೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಾಲೂಕು ಆಡಳಿತಕ್ಕೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸೊರಬ ಪಿಎಸ್‌ಐ ನಾಗರಾಜ್, ರಾಜು ರೆಡ್ಡಿ ಅಗಸೆ, ಅರಣ್ಯ ವಲಯ ಸಂರಕ್ಷಣಾಧಿಕಾರಿ ಯೋಗೇಶ್, ಶ್ರೀ ರೇಣುಕಾಂಬ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸೇರಿದಂತೆ ಕಂದಾಯ ಅಧಿಕಾರಿಗಳು ಹಾಜರಿದ್ದರು.

- - -

-11ಕೆಪಿಸೊರಬ03:

ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬಾ ದೇವಸ್ಥಾನದ ಕೋಟೆಯನ್ನು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ