ಕನ್ನಡಪ್ರಭ ವಾರ್ತೆ ಯಮಕನಮರಡಿಬಿಜೆಪಿಯವರು ಮಧ್ಯಪ್ರದೇಶದಲ್ಲಿ ನೀಡುತ್ತಿರುವ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿಲ್ಲವೆ ಎಂದು ಕಾಂಗ್ರೆಸ್ ಮುಖಂಡ ಡಿ.ಟಿ.ಶ್ರೀನಿವಾಸ್ ಪ್ರಶ್ನಿಸಿದರು.
ಕರ್ನಾಟಕ, ಮಧ್ಯಪ್ರದೇಶ, ತಮಿಳನಾಡು, ತೆಲಂಗಾಣ ಸೇರಿದಂತೆ ಕೆಲ ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಭವಿಷ್ಯ ಈ ಚುನಾವಣೆಯಿಂದ ತಿಳಿಯಲಿದೆ ಎಂದು ಭವಿಷ್ಯ ನುಡಿದರು.
ಹಿಡಕಲ್ ಡ್ಯಾಂ ಶಿಧಿಹಟ್ಟಿಯಲ್ಲಿ ಹಣಬರ ಸಮಾಜದವರನ್ನು ಭೇಟಿಯಾಗಿ ಪ್ರಿಯಾಂಕಾ ಜಾರಕಿಹೊಳಿ ಬೆಂಬಲಿಸುವಂತೆ ಮನವಿ ಮಾಡಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಈ ಬಾರಿ ಚಿಕ್ಕೋಡಿ ಹಾಗೂ ಬೆಳಗಾವಿ ಕ್ಷೇತ್ರದಲ್ಲಿ ಫಲಿತಾಂಶ ಕಾಂಗ್ರೆಸ್ ಪರವಾಗಿರಲಿದೆ. ಕಾರಣ 2 ಕ್ಷೇತ್ರಗಳ ಮತದಾರರು ಪಕ್ಷಕ್ಕೆ ಉತ್ತಮ ಬೆಂಬಲ ಸೂಚಿಸುತ್ತಿದ್ದಾರೆ. ಬೆಳಗಾವಿ ಹಾಗೂ ರಾಜ್ಯ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು ವರದಾನವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಣಬರ ಸಮಾಜದ ಜಿಲ್ಲಾಧ್ಯಕ್ಷ ಶೀತಲ ಮುಂಡೆ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮಂಜುನಾಥ ಪಾಟೀಲ, ವಿಠ್ಠಲ ಮಾದರ, ಸುವರ್ಣಾ ಮಗದುಮ್ಮ, ಧರ್ಮಣ್ಣ ತೋಳಿ, ಯಾದವಾಡದ ನಾಗಪ್ಪ ಮಿರ್ಜಿ, ರುದ್ರಪ್ಪ ಸಂಗಪ್ಪಗೋಳ, ಶಿವಲಿಂಗ ಪೂಜೇರಿ, ಸರ್ಫರಾಜ ಫಿರಜಾದೆ, ಕಲ್ಲಪ್ಪ ಜುಜಂಗಗೋಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.