ಎಸ್ಸಿ, ಎಸ್ಟಿ ಜನರು ವಾಸಿಸುವ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು: ಡಿಸಿ ಮೀನಾ ನಾಗರಾಜ್‌

KannadaprabhaNewsNetwork |  
Published : Oct 11, 2024, 11:55 PM IST
ಮೀನಾ ನಾಗರಾಜ್ | Kannada Prabha

ಸಾರಾಂಶ

ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ಜನರು ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

- ಅನುಸೂಚಿತ ಜಾತಿ, ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆ

-

- ವಸತಿ, ನಿವೇಶನ ಹಾಗೂ ಸ್ಮಶಾನಕ್ಕೆ ಮೀಸಲಾಗಿರುವ ಜಾಗಗಳು ಒತ್ತುವರಿ

- ತಾಂತ್ರಿಕ ತೊಂದರೆ ಬಗೆಹರಿಸಲು ಟಾಸ್ಕ್ ಪೋರ್ಸ್ ಸಮಿತಿ

- ವಿವಿಧ ಸಮಸ್ಯೆಗಳನ್ನು 2 ತಿಂಗಳಲ್ಲಿ ಬಗೆಹರಿಸುವ ಗುರಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ಜನರು ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಅನುಸೂಚಿತ ಜಾತಿ, ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧೆಡೆ ಪರಿಶಿಷ್ಟ ಜಾತಿ, ಪಂಗಡಗಳ ಜನರಿಗೆ ವಸತಿ, ನಿವೇಶನ ಹಾಗೂ ಸ್ಮಶಾನಕ್ಕೆ ಮೀಸಲಾಗಿರುವ ಜಾಗಗಳು ಒತ್ತುವರಿಯಾಗಿವೆ ಎಂದು ಬಂದಿರುವ ದೂರುಗಳನ್ನು ಸ್ವೀಕರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಲವೆಡೆ ಅರಣ್ಯ, ಕಂದಾಯ ಭೂಮಿಗಳಲ್ಲಿರುವ ತಾಂತ್ರಿಕ ತೊಂದರೆ ಬಗೆಹರಿಸಲು ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದ್ದು, ಈ ಸಮಿತಿಯಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.ಗಣಿ ಗುತ್ತಿಗೆಗಳನ್ನು ಹರಾಜು ಮೂಲಕ ಮಂಜೂರಾತಿಗೆ ನಿಯತ-3ಎಫ್‌ ರಂತೆ ಈ ಸಮುದಾಯಕ್ಕೆ ಸೇರಿದ ವ್ಯಕ್ತಿ ಅಥವಾ ನೋಂದಾಯಿತ ಸಂಘ, ವಂಶ ಪಾರಂಪರಿಕವಾಗಿ ಕಲ್ಲು ಗಣಿಗಾರಿಕೆ ನಿರ್ವಹಿಸುತ್ತಿರುವ ಹಾಗೂ ಆರ್ಥಿಕ ದುರ್ಬಲ ವರ್ಗದವರಿಗೆ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಕಂದಾಯ ಇಲಾಖೆಗೆ ಸೇರಿದ ವಿವಿಧ ಸಮಸ್ಯೆಗಳನ್ನು ಇನ್ನೂ 2 ತಿಂಗಳೊಳಗೆ ಎಲ್ಲಾ ಸಮಸ್ಯೆ ಬಗೆಹರಿಸಲು ಸರ್ಕಾರ ಗುರಿ ನಿಗಧಿಪಡಿಸಿದೆ. ಅಷ್ಟರಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ ಎಂದು ಹೇಳಿದರು.ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪರಿಶಿಷ್ಟ ಜಾತಿ, ಪಂಗಡಗಳು ಸಲ್ಲಿಸಿರುವ ನಿವೇಶನಗಳ ಹಕ್ಕುಪತ್ರ ನೀಡಲು ಹಾಗೂ ಸೂಕ್ತ ಕ್ರಮ ಕೈ ಗೊಳ್ಳಲು ಎಲ್ಲಾ ತಹಸೀಲ್ದಾರ್‌ಗಳಿಗೆ ಸೂಚಿಸಲಾಗಿದೆ. ಕೆಲವೆಡೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸುವಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಿದರು.ಜಿಲ್ಲೆಯ ಕೆಲವು ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಮಿತಿ ಸದಸ್ಯರು ಸಭೆ ಗಮನಕ್ಕೆ ತಂದರು. ವಸತಿ ಶಾಲೆಗಳ ಮೂಲಭೂತ ಸಮಸ್ಯೆ ಹಾಗೂ ವಿದ್ಯಾರ್ಥಿಗಳಿಗೆ ಇರುವ ಕೆಲ ಅನಾನುಕೂಲಗಳ ಬಗ್ಗೆ ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದರ್ ಕುಮಾರ್ ದಹಿಮ, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ತಹಸೀಲ್ದಾರ್ ಡಾ. ಸುಮಂತ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೇಶ್ ಹಾಗೂ ಸಮಿತಿ ಸದಸ್ಯರಾದ ರಮೇಶ್, ಮಹೇಶ್, ಮರುಳಪ್ಪ, ಶಂಕರ್, ಅಣ್ಣೇಗೌಡ ಉಪಸ್ಥಿತರಿದ್ದರು. 10 ಕೆಸಿಕೆಎಂ 1

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ