ಮಂಗಳೂರು: ಪ್ರಸಕ್ತ ದಿನಗಳಲ್ಲಿ ಅಡಕೆ ಬೆಳೆಗಾರರು ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಎಲೆಚುಕ್ಕಿ ರೋಗ, ಹಳದಿ ಎಲೆರೋಗದ ಜೊತೆಗೆ ಈಗ ಅಡಕೆ ಮರ ಸಾಯುವುದು ಕೂಡಾ ಕೇಳಿಬರುತ್ತಿದೆ. ಇದರ ಜೊತೆಗೆ ಅಡಕೆ ಹಾನಿಕಾರಕ ಎನ್ನುವ ಬಗ್ಗೆಯೂ ಅಪವಾದಗಳು ಬರುತ್ತಲೇ ಇವೆ. ಹೀಗಾಗಿ ಎಲ್ಲ ಅಂಶಗಳನ್ನೂ ಸೇರಿಸಿಕೊಂಡು ಅಡಕೆ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಹಾಗೂ ಅದಕ್ಕೆ ಪೂರಕವಾಗಿ ಮಾಡಬೇಕಾದ ಅಗತ್ಯ ಕೆಲಸಗಳನ್ನು ಜೊತೆಯಾಗಿ ಮಾಡಬೇಕಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ಸೋಮವಾರ ಧರ್ಮಸ್ಥಳದಲ್ಲಿ ನಡೆದ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ(ಎಆರ್‌ಡಿಎಫ್) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನದ ಟ್ರಸ್ಟಿಗಳಾದ ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರ ಎಸ್. ಆರ್, ಅಡಕೆ ಮಹಾಮಂಡಳದ ಅಧ್ಯಕ್ಷ ಅರಗ ಜ್ಞಾನೇಂದ್ರ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೆಂಕಟ್ರಮಣ ವೈದ್ಯ, ಮ್ಯಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಎಸ್. ಎಚ್, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ, ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ, ತುಮ್ಕೋಸ್ ಅಧ್ಯಕ್ಷ ಎಸ್ ಎಚ್ ಶಿವಕುಮಾರ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನದ ಕಾರ್ಯನಿರ್ವಹಣಾಧಿಕಾರಿ ಡಾ. ಎಸ್ ಕೇಶವ ಭಟ್ ಹಾಗೂ ವಿಶೇಷ ಆಹ್ವಾನಿತರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೃಷಿ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ, ಅಕ್ವಾ ಬಯೋ ಸೊಲ್ಯೂಶನ್ ಸಿಇಒ ಆತ್ರೇಯ, ಕೃಷಿ ಸಂಶೋಧಕ ಬದನಾಜೆ ಶಂಕರ ಭಟ್ ಮತ್ತಿತರರಿದ್ದರು.