ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಬಳಿಕ ಮಾತನಾಡಿದ ಅವರು, 2013ರಲ್ಲಿ ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿದ್ದಾಗ ಈ ಭಾಗದ ಶಾಸಕರಾಗಿದ್ದ ಜಯಣ್ಣರವರು ಕ್ರೀಡೆಗೆ ಹೆಚ್ಚು ಒತ್ತು ನೀಡಿ ಒಳಾಂಗಣ ಕ್ರೀಡಾಂಗಣ ಆರಂಭಿಸಿದರು. ನಾನು ಶಾಸಕನಾದ ಮೇಲೆ ಒಳಾಂಗಣ ಕ್ರೀಡಾಂಗಣದ ಮುಂದುವರಿದ ಕಾಮಗಾರಿಯನ್ನು ಪೂರ್ಣಗೊಳ್ಳಲು ಮಹದೇಶ್ವರಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಣ ಮಂಜೂರು ಮಾಡಿಸಿ, ಇಂದು ಇಲ್ಲಿನ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪೂರ್ಣ ಮಾಡಲು ಚಾಲನೆ ನೀಡಲಾಗಿದೆ. ಈ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಿರ್ವಹಣೆಗೊಂಡು, ಇನ್ನೂ 6 ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಸ್ತೀಪುರ ಶಾಂತರಾಜು, ರಮೇಶ್, ಮಾಜಿ ಸದಸ್ಯ ಮಂಜುನಾಥ್, ಮಹದೇಶ್ವರ ಕಾಲೇಜು ಉಪನ್ಯಾಸಕ ಸುಂದರಮೂರ್ತಿ, ಕ್ರೀಡಾ ಇಲಾಖೆ ಎಇಇ ಜಯಪ್ರಕಾಶ್, ಗುತ್ತಿಗೆದಾರ ಕೃಷ್ಣಪ್ಪ ಉಪಸ್ಥಿತರಿದ್ದರು.