ವಸತಿಶಾಲೆಗಳ ಸದ್ಬಳಕೆಗೆ ಎಆರ್‌ಕೆ ಸಲಹೆ

KannadaprabhaNewsNetwork |  
Published : Jun 23, 2025, 11:48 PM IST
ವಸತಿಶಾಲೆಗಳ  ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕರ ಸಲಹೆ | Kannada Prabha

ಸಾರಾಂಶ

ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಡಾ.ಅಂಬೇಡ್ಕರ್ ಬಾಲಕಿಯರ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ಚನ್ನಪ್ಪನಪುರ ಗ್ರಾಮದಲ್ಲಿ ಕರ್ನಾಟಕ ವಸತಿಶಿಕ್ಷಣ ಸಂಸ್ಥೆಗಳ ವತಿಯಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ ಡಾ.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ಇದೇ ವೇಳೆ ಮಾತನಾಡಿ, ರಾಜ್ಯಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಹಣ ವೆಚ್ಚ ಮಾಡುತ್ತಿದೆ. ಚನ್ನಪ್ಪನಪುರ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವತಿಯಿಂದ ₹೨.೨೦ ಕೋಟಿ ವೆಚ್ಚದಲ್ಲಿ ೧ನೇ ಮಹಡಿಯಲ್ಲಿ ಶಾಲಾಕಟ್ಟಡ, ಮೊದಲು ಮತ್ತು ಎರಡನೇ ಮಹಡಿಯಲ್ಲಿ ೨ ವಸತಿನಿಲಯ, ನೆಲಮಹಡಿಯಲ್ಲಿ ಊಟದ ಸಭಾಂಗಣ, ಭೋದಕರ ವಸತಿನಿಲಯ, ಆಡಿಟೋರಿಯಂ ನಿರ್ಮಿಸಲಾಗುತ್ತಿದೆ. ಗುತ್ತಿಗೆದಾರರು ಆದಷ್ಟು ಬೇಗ ವಸತಿನಿಲಯ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಿ, ವಿದ್ಯಾರ್ಥಿನಿಯರ ವಾಸ್ತವ್ಯಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.ಓದಿನ ಜತೆ ವಿದ್ಯಾರ್ಥಿಗಳು ವಾಸ್ತವ್ಯ ಹೂಡಲು ವಸತಿನಿಲಯಗಳ ಅಗತ್ಯವಿದೆ. ದೂರದ ಊರುಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳು ವಸತಿಶಾಲೆಗಳ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ರವಿಕುಮಾರ್, ಸದಸ್ಯರಾದ ಸುಂದ್ರಮ್ಮ, ಪ್ರಸಾದ್, ಎಪಿಎಂಸಿ ಮಾಜಿಅಧ್ಯಕ್ಷ ಬಿ.ಕೆ.ರವಿಕುಮಾರ್,ಮುಖಂಡರಾದ ಎ.ಎಸ್.ಗುರುಸ್ವಾಮಿ, ಬಸವಣ್ಣ, ಮಹದೇವಶೆಟ್ಟಿ, ಮಹೇಶ್, ನಾಗರಾಜಮೂರ್ತಿ, ನಾಗೇಂದ್ರ, ಎಇಇ ಕೆ,ಎನ್,ತನೊಜ್‌ಕುಮಾರ್, ಎಇ ಮಂಜುನಾಯಕ್, ಪ್ರಾಂಶುಪಾಲ ನಾಗೇಂದ್ರ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ