ಲೋಕಸಭೆ ಚುನಾವಣೆ: ಶಸ್ತ್ರ/ ಆಯುಧ ಠೇವಣಿ ಇರಿಸಬೇಕು: ಜಿಲ್ಲಾಧಿಕಾರಿ

KannadaprabhaNewsNetwork |  
Published : Mar 19, 2024, 12:47 AM IST
ವೆಪನ್ಸ್‌ | Kannada Prabha

ಸಾರಾಂಶ

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜೂನ್ 6 ರವರೆಗೆ ಜಾರಿಯಲ್ಲಿ ಇದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಶಿವಮೊಗ್ಗ: ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 6 ರವರೆಗೆ ಜಾರಿಯಲ್ಲಿ ಇರುವುದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ, ಠೇವಣಿ ಮಾಡಿದ ಶಸ್ತ್ರ/ ಆಯುಧ ಪರವಾನಿಗೆದಾರರಿಗೆ ಸೂಕ್ತ ರಸೀದಿ ನೀಡುವಂತೆ ಸೂಚಿಸಿದ್ದರೆ. ಚುನಾವಣೆ ಫಲಿತಾಂಶ ಘೋಷಿಸಿದ ನಂತರ ಅಂದರೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಪಾಜಿಟ್ ಮಾಡಿದ ಪರವಾನಿಗೆಯನ್ನು ಹಿಂದಿರುಗಿಸಲು ಸೂಚಿಸಿದ್ದಾರೆ. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿದೆ. ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಧಾರ್ಮಿಕ ಸಂಸ್ಥೆಗಳು, ಸರ್ಕಾರಿ/ ಅರೆಸರ್ಕಾರಿ ಮತ್ತು ಸರ್ಕಾರೇತರ ಖಾಸಗಿ ಸಂಸ್ಥೆಗಳಲ್ಲಿ ಭದ್ರತೆಗಾಗಿ ಆಯುಧಗಳನ್ನು ಹೊಂದಿರುವವರು ಹಾಗೂ ವೈಯಕ್ತಿಕವಾಗಿ ಜೀವ ಬೆದರಿಕೆ ಹೊಂದಿರುವವರು ಆಯುಧಗಳನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುವ ಅನಿವಾರ್ಯತೆ ಇದ್ದಲ್ಲಿ, ಇಂತಹ ಶಸ್ತ್ರ ಪರವಾನಿಗೆದಾರರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅರ್ಜಿ ಸಲ್ಲಿಸಬೇಕು. ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು. ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ಸ್ಕ್ರೀನಿಂಗ್ ಕಮಿಟಿ ಸದಸ್ಯರಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಅರ್ಜಿಗಳನ್ನು ಕಮಿಟಿ ಮುಂದೆ ಮಂಡಿಸಿ, ಅರ್ಜಿಗಳ ಅರ್ಹತೆ ಮೇರೆಗೆ ಪರಿಶೀಲಿಸಿ, ನೀತಿ ಸಂಹಿತೆಯ ಅನ್ವಯ ವಿನಾಯಿತಿ ನೀಡುವ ಬಗ್ಗೆ ಕ್ರಮ ವಹಿಸುವಂತೆ ಆದೇಶದಲ್ಲಿ ತಿಳಿಸಿದೆ. ಜಿಲ್ಲೆಯ ಚುನಾವಣಾ ಘೋಷಿತ ಯಾವುದೇ ಪ್ರದೇಶಗಳಲ್ಲಿ ಹೊರಗಿನ ಅಥವಾ ಯಾವುದೇ ವ್ಯಕ್ತಿಗಳು ಶಸ್ತ್ರ/ಬಂದೂಕು ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ. 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113- ಶಿವಮೊಗ್ಗ, 114- ತೀರ್ಥಹಳ್ಳಿ, 115-ಶಿಕಾರಿಪುರ, 116-ಸೊರಬ ಹಾಗೂ 117-ಸಾಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬ್ಯಾಂಕುಗಳು ಮತ್ತು ಫ್ಯಾಕ್ಟರಿಗಳ ಭದ್ರತೆಗೋಸ್ಕರ ಆಯುಧಗಳನ್ನು ಹೊಂದಿರುವವರಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ.- - - (-ಫೋಟೋ: ವೆಪನ್ಸ್‌)

PREV

Recommended Stories

ಬೆಂಗಳೂರಲ್ಲಿ ಭರ್ಜರಿ ಮಳೆಗೆ ವಾಹನ ಸವಾರರ ಪರದಾಟ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ