ಕುಡಿವ ನೀರು, ಮೇವಿಗೆ ವ್ಯವಸ್ಥೆ ಮಾಡಿ

KannadaprabhaNewsNetwork |  
Published : May 01, 2024, 01:17 AM IST
ವಿಜಯಪುರದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಪ್ಪಾ ಪೂಜಾರಿ ನೇತೃತ್ವದಲ್ಲಿ ರೈತರು ಬೃಹತ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಡಬೇಕು. ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಡಬೇಕು. ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲೆಯ ಎಲ್ಲಾ ೧೩ ತಾಲೂಕುಗಳಿಂದ ಆಗಮಿಸಿದ ರೈತರು ನಗರದ ಗಾಂಧಿ ವೃತ್ತದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ, ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬಸವೇಶ್ವರ ವೃತ್ತದ ಮಾರ್ಗವಾಗಿ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ರಾಜ್ಯಾಧ್ಯಕ್ಷ ಚುನಪ್ಪಾ ಪೂಜಾರಿ ಅವರು, ಮುಂಗಾರು, ಹಿಂಗಾರು ಸಂಪೂರ್ಣ ಕೈಕೊಟ್ಟಿರುವುದರಿಂದ ನಾಡಿನ ರೈತ ಕುಲ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಈ ವರ್ಷದ ಅತೀ ಹೆಚ್ಚು ಬಿಸಿಲಿನ ಕಾರಣದಿಂದ ಜನ ಜಾನುವಾರುಗಳು ಹನಿ ನೀರಿಗಾಗಿ ಪರದಾಡುವಂತಾಗಿದೆ. ಆದ್ದರಿಂದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರಕಾರ ಬರ ಪರಿಹಾರ ಕೊಡಬೇಕು, ಕುಡಿಯಲು ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕುಡಿಯಲು ನೀರು ಹಾಗೂ ಮೇವಿನ ಸಮಸ್ಯೆ ತುಂಬಾ ಇದೆ. ಫಸಲ್ ಬಿಮಾ ಯೋಜನೆಯಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆದು ಮಧ್ಯವರ್ತಿಗಳಿಗೆ ಹೊರಗಿಟ್ಟು ಸರ್ಕಾರವೇ ವಿಮೆಯನ್ನು ತುಂಬಿಸಿಕೊಳ್ಳುವಂತಹ ವ್ಯವಸ್ಥೆ ಮಾಡಿದಾಗ ನಿಜವಾಗಿ ನಷ್ಟಗೊಂಡ ರೈತರಿಗೆ ಪರಿಹಾರ ಸಿಗುವುದು. ವಿದ್ಯುತ್ ಸಮಸ್ಯೆ ಬಗೆಹರಿಸಬೇಕು. ಜೊತೆಗೆ ರಾತ್ರಿ ಸಿಂಗಲ್ ಫೇಸ್ ಕೊಡಬೇಕು, ಇತ್ತೀಚಿಗೆ ಅಕಾಲಿಕ ಗಾಳಿ ಹಾಗೂ ಮಳೆಯಿಂದಾಗಿ ನಷ್ಟಗೊಂಡ ರೈತರಿಗೆ ಸರಿಯಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ ಮಾತನಾಡಿ, ಜಿಲ್ಲೆಯ ಎಲ್ಲಾ 9 ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ಬಾಕಿ ಬಿಲ್‌ ಬರಬೇಕು. ಆಲಮಟ್ಟಿ ಜಲಾಶಯ ಎತ್ತರಗೊಳ್ಳಬೇಕು. ಇದರಿಂದ ಹೆಚ್ಚುವರಿ ೧೩೦ ಟಿ.ಎಂ.ಸಿ ನೀರು ಉಳಿಯುವುದು ಇದರಿಂದ ಜಿಲ್ಲೆಯ ಎಲ್ಲಾ ಕೆರೆ ತುಂಬಿ ಅಂರ್ತಜಲ ಹೆಚ್ಚಾಗುವುದು ಎಂದರು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು ೨೪ ಏತನೀರಾವರಿ ಯೋಜನೆಗಳು ನಡೆಯುತ್ತಿದ್ದು, ಎಲ್ಲವೂ ಕಳಪೆ ಮಟ್ಟದಿಂದ ಕೂಡಿವೆ. ಯಾವ ಕಾಮಗಾರಿಯೂ ಸಂಪೂರ್ಣ ಮುಗಿದಿಲ್ಲ, ರೈತರಿಗೆ ಬರಬೇಕಾಗಿರುವ ಭೂಸ್ವಾಧೀನದ ಹಣ ಹತ್ತು ವರ್ಷಗಳಾದರೂ ಇನ್ನು ಬಂದಿಲ್ಲ. ಬೂದಿಹಾಳ-ಪೀರಾಪುರ, ಚಿಮ್ಮಲಗಿ, ತುಬಚಿ ಬಬಲೇಶ್ವರ, ಮುಳವಾಡ, ರೇವಣ ಸಿದ್ದೇಶ್ವರ ಏತನೀರಾವರಿ ಯೋಜನೆಯಡಿ ರೈತರಿಗೆ ಭೂ ಪರಿಹಾರದ ಹಣ ಇನ್ನುವರೆಗೂ ಬಂದಿಲ್ಲ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ರೈತರಿಗೆ ಹಣ ಕೊಡದೇ ಯಾರಿಗೂ ಕಾಮಗಾರಿ ಮಾಡದಂತೆ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ದೂರಿದರು.

ಕೋಲಾರ ಅಧ್ಯಕ್ಷ ಸೋಮು ಬಿರಾದಾರ, ಮಹಿಳಾ ಜಿಲ್ಲಾಧ್ಯಕ್ಷೆ ರೇಖಾ ಪಾಟೀಲ, ದೇವರ ಹಿಪ್ಪರಗಿ ತಾಲೂಕಾ ಅಧ್ಯಕ್ಷ ಈರಪ್ಪ ಕುಳೆಕುಮಟಗಿ, ಸಿ.ಎಸ್.ಪ್ಯಾಠಿ, ಶಾನೂರ ನಂದರಗಿ, ಸಂಪತ್ತ ಜಮಾದಾರ ಮಾತನಾಡಿದರು.

ಕಾರ್ಯಾಧ್ಯಕ್ಷ ರಾಜು ಪವಾರ, ಬಬಲೇಶ್ವರ ತಾಲೂಕಾ ಅಧ್ಯಕ್ಷ ಮಕಬುಲ ಕಿಜಿ, ಇಂಡಿ ಅಧ್ಯಕ್ಷ ಹೆಚ್ ಎಂ ಪೂಜಾರಿ, ತಾಳಿಕೋಟಿ ಅಧ್ಯಕ್ಷ ಶ್ರೀಶೈಲ ವಾಲಿಕಾರ, ವಿಜಯಪುರ ತಾಲೂಕಾ ಅಧ್ಯಕ್ಷ ಅರುಣಗೌಡ ತೇರದಾಳ, ಶಿವಾನಂದಯ್ಯ ಹಿರೇಮಠ, ಹಣಮಂತ ಬ್ಯಾಡಗಿ, ರಾಜುಗೌಡ ಬಿರಾದಾರ, ಸಂಗಪ್ಪ ಟಕ್ಕೆ, ಅಲೋಕ ಬೈರಾಮಡಿ, ರಾಮನಗೌಡ ಪಾಟೀಲ, ಪ್ರಕಾಶ ತೇಲಿ, ಸಂಗಪ್ಪ ಚಲವಾದಿ, ಸಂಗಮೇಶ ಹುಣಸಗಿ, ನಜೀರ ನಂದರಗಿ, ಮಹದೇವ ಕದಮ್, ಮಹಾದೇವಪ್ಪ ತೇಲಿ, ಮಲ್ಲಿಕಾರ್ಜುನ ಗೋಡೆಕರ, ಮಹಾತೇಂಶ ಮಮದಾಪುರ, ಕಲ್ಲಪ್ಪ ಪಾರಶೆಟ್ಟಿ, ಪ್ರಭು ಕಾರಜೋಳ, ಸುಭಾಸ ಸಜ್ಜನ, ಶಶಿಕಾಂತ ಬಿರಾದಾರ, ಸತೀಶ ಕುಲ್ಲೊಳ್ಳಿ, ಮಹಿಬೂಬ ಬಾಷಾ ಮನಗೂಳಿ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!