ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ: ಶಾಸಕ ಕೆ.ಎಸ್‌.ಬಸವಂತಪ್ಪ ಮನವಿ

KannadaprabhaNewsNetwork |  
Published : Jul 07, 2024, 01:16 AM IST
ಕ್ಯಾಪ್ಷನಃ5ಕೆಡಿವಿಜಿ42ಃಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದರು. | Kannada Prabha

ಸಾರಾಂಶ

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಭಾರಿ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸರ್ಕಾರ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಬಿಇಡಿ, ಡಿಪ್ಲೊಮಾ, ಐಟಿಐ, ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ಜಾಬ್ ಓರಿಯೆಂಟೆಡ್ ಕೋರ್ಸ್‌ಗಳಿಗೆ ಪ್ರವೇಶ ಪಡೆದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಹಾಸ್ಟೆಲ್ ವ್ಯವಸ್ಥೆ ಇಲ್ಲ. ಪ್ರತಿನಿತ್ಯ 25-30 ಕಿ.ಮೀ. ದೂರದ ಊರುಗಳಿಂದ ಕಾಲೇಜಿಗೆ ಬಂದು ಹೋಗುವುದು ಬಹಳ ಕಷ್ಟವಾಗುತ್ತಿದೆ. ಆ ಮಕ್ಕಳು ಶಿಕ್ಷಣ ವಂಚಿತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಅನುದಾನ ಒದಗಿಸಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿದರೆ ಬಡ ಮಕ್ಕಳು ಶಿಕ್ಷಣ ಕಲಿತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕೆಎಸ್‌ಎಸ್‌ಐಡಿಸಿಯಲ್ಲಿ ಉದ್ದಿಮೆ ಸ್ಥಾಪಿಸಲು ನಿವೇಶನ ಪಡೆದ ಎಸ್ಸಿ-ಎಸ್ಟಿ ನಿರುದ್ಯೋಗಿ ಯುವಕರು ಆರ್ಥಿಕ ತೊಂದರೆಯಿಂದ ಕಂತು ಪಾವತಿ ಮಾಡಲು ವಿಳಂಬ ಆಗಿದೆ. ಅದಕ್ಕೆ ಹೆಚ್ಚಿನ ಬಡ್ಡಿ ವಿಧಿಸುತ್ತಿದ್ದು, ಮೊದಲೇ ಆರ್ಥಿಕ ಸಂಕಷ್ಟದಿಂದ ಎದುರಿಸುತ್ತಿರುವ ಎಸ್ಸಿ-ಎಸ್ಟಿ ಫಲಾನುಭವಿಗಳಿಗೆ ಹೆಚ್ಚಿನ ಬಡ್ಡಿ ಹಾಕುವುದು ಸರಿಯಲ್ಲ. ಕೂಡಲೇ ಬಡ್ಡಿ ಮನ್ನಾ ಮಾಡಬೇಕು. ಉದ್ಯಮ ಸ್ಥಾಪಿಸಿ ಆರ್ಥಿಕ ವೃದ್ಧಿ ಕಾಣುವ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ದೇವದಾಸಿ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ನೇರ ಪ್ರವೇಶ ಕಲ್ಪಿಸಲು ಅವಕಾಶ ನೀಡಬೇಕು. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹೊಂದಿರುವ ಎಸ್ಸಿ ಮತ್ತು ಎಸ್ಟಿ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು 1 ಲಕ್ಷ ರೂ. ನಿಗದಿ ಮಾಡಲಾಗಿದೆ. ಅದನ್ನು ₹3 ರಿಂದ ₹5 ಲಕ್ಷಕ್ಕೆ ನಿಗದಿ ಮಾಡಬೇಕು. ಇದರಿಂದ ಬಡಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶಾಸಕರ ಅಧ್ಯಕ್ಷತೆಯಲ್ಲಿ ಸರ್ಕಾರದಿಂದ ಬೋರ್‌ವೆಲ್, ವಸತಿ, ಸಾಲ, ಗುಂಪು ಸಾಲ, ವೈಯಕ್ತಿಕ ಸಾಲ ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆಗೆ ಕಡಿಮೆ ಪ್ರಮಾಣದ ಗುರಿ ನೀಡಲಾಗುತ್ತದೆ. ಸೌಲಭ್ಯ ವಿತರಿಸುವ ಗುರಿ ಹೆಚ್ಚಳ ಮಾಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಶಾಸಕ ಬಸವಂತಪ್ಪ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಪ್ರದಾಯ ತಿರಸ್ಕರಿಸದಿದ್ರೆ ಪ್ರಗತಿಶೀಲತೆ ಪ್ರಬಲವಾಗದು
ಸೋಮಾರಿಗಳಾಗದೆ ಕ್ರಿಯಾಶೀಲರಾಗಲಿ