ಅಂಜನಾದ್ರಿಯಲ್ಲಿ ಹನುಮಮಾಲೆ ವಿಸರ್ಜನೆಗೆ ವ್ಯವಸ್ಥೆ

KannadaprabhaNewsNetwork |  
Published : Nov 21, 2025, 02:30 AM IST
20ಉಳಉ1,2.3  | Kannada Prabha

ಸಾರಾಂಶ

ಹೋಮ, ಹವನ, ಅಲಂಕಾರ, ವಿಡಿಯೋ ಲೈವ್ ಸ್ಟ್ರೀಮಿಂಗ್, ಸ್ನಾನಘಟ್ಟ, ಶೌಚಾಲಯ ಮತ್ತು ಈ ಕೂಡಲೆ ಸ್ವಚ್ಛತೆ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ

ಗಂಗಾವತಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿಯಲ್ಲಿ ಡಿ.2,3 ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯುತ್ತಿದ್ದು, ಬರುವ ಭಕ್ತರಿಗೆ ಯಾವುದೇ ಸಮಸ್ಯೆಗಳಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಗುರುವಾರ ಅಂಜನಾದ್ರಿಗೆ ಭೇಟಿ ನೀಡಿ ಡಿ.2,3 ರಂದು ನಡೆಯಲಿರುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದ ಪೂರ್ವ ಸಿದ್ಧತೆ ಸ್ಥಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದರು.

ಹನುಮಮಾಲಾ ಕಾರ್ಯಕ್ರಮಕ್ಕೆ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ವಾಹನಗಳ ಪಾರ್ಕಿಂಗ್, ಬ್ಯಾರಿಕೇಡ್ ವ್ಯವಸ್ಥೆ, ಲೈಟಿಂಗ್, ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸಿಸಿಟಿವಿ ಅಳವಡಿಕೆ ಸೇರಿದಂತೆ ಇತರೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಹೋಮ, ಹವನ, ಅಲಂಕಾರ, ವಿಡಿಯೋ ಲೈವ್ ಸ್ಟ್ರೀಮಿಂಗ್, ಸ್ನಾನಘಟ್ಟ, ಶೌಚಾಲಯ ಮತ್ತು ಈ ಕೂಡಲೆ ಸ್ವಚ್ಛತೆ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು. ಶಾಸಕರು ಒಳಗೊಂಡಂತೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅವರ ನಿರ್ದೇಶನದಂತೆ ಕೆಲಸ ಕಾರ್ಯ ಮಾಡುತ್ತಿದ್ದು. ಈ ವರ್ಷ ಒಂದುವರೆ ಲಕ್ಷದಿಂದ ಎರಡು ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು ಈ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಈ ತಿಂಗಳ 30 ನೇ ತಾರೀಖಿನ ಒಳಗಡೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಈಗಾಗಲೇ ಎಲ್ಲ ಕಡೆಯ ಪಾರ್ಕಿಂಗ್ ಸ್ಥಳಗಳಿಗೆ ಭೇಟಿ ನೀಡಲಾಗಿದೆ. ಸುಮಾರು 25 ಕಡೆ ಚೆಕ್ ಪೋಸ್ಟ್ ಮಾಡಲಾಗುವುದು. ಪಾರ್ಕಿಂಗ್ ಸ್ಥಳ ಮತ್ತು ಊಟದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. 15 ನೂರು ಜನ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಪಂಚಾಯಿತಿ ವತಿಯಿಂದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ವಿವಿಧ ಕಡೆಯಿಂದ ಬರುವ ಜನರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಬ್ಯಾರಿಕೇಡ್ ವ್ಯವಸ್ಥೆ, ಕಂಟ್ರೋಲ್ ರೂಮ್, ಮೆಡಿಕಲ್ ಟೀಂನ ಸ್ಥಳ, ವೇದಪಾಠ ಶಾಲೆಯಲ್ಲಿ ಪ್ರಸಾದ ವಿತರಣೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಅಂಜನಾದ್ರಿ ಬೆಟ್ಟದ ತುದಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕ್ಷಕ ಆರ್.ಹೇಮಂತಕುಮಾರ, ಸಹಾಯಕ ಆಯುಕ್ತ ಮಹೇಶ್ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಹಾಗೂ ಕೊಪ್ಪಳ, ಗಂಗಾವತಿ ಹಾಗೂ ಕನಕಗಿರಿ ತಹಸೀಲ್ದಾರರು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೆಹಲಿ ಭೇಟಿ ವೇಳೆ ಉಪಮುಖ್ಯಮಂತ್ರಿ ನಿಗೂಢ ಹೇಳಿಕೆ
ಹುಣಸೂರಿನಲ್ಲಿ ₹10 ಕೋಟಿ ಚಿನ್ನ ದೋಚಿದ್ದವರು ಬಿಹಾರದಲ್ಲಿ ಬಲೆಗೆ