ಬಿಜೆಪಿ ನಾಯಕರ ಬಂಧನ ಬಿಡುಗಡೆ

KannadaprabhaNewsNetwork |  
Published : Aug 23, 2026, 03:00 AM IST
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ಟೈರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಬಿ. ನಾಗೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಟಿಜಿಟಿ ಮಳೆಯ ನಡುವೆಯೂ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಕಿತ್ತೂರು ಕ್ಷೇತ್ರದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ ಹಾಗೂ ಲಕ್ಷ್ಮೀ ಇನಾಂದಾರ್ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಾತನಾಡಿದ ಲಕ್ಷ್ಮೀ ಇನಾಮದಾರ್, ನಾಗೇಂದ್ರ ರಾಜೀನಾಮೆ ನೀಡುವವರೆಗೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ತೀವ್ರಗೊಳ್ಳಲಿದೆ. ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ಆರೋಪಗಳ ಹಿನ್ನೆಲೆಯಲ್ಲಿ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ರೈತರ ಬೆಳೆ ಪರಿಹಾರ, ಮಾಸಾಶನ ಸೇರಿದಂತೆ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಕೆಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಗರದ ಹೊರವಲಯಕ್ಕೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದರು. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಹೋರಾಟ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾನಗರ ಅಧ್ಯಕ್ಷ ಗೀತಾ ಸುತಾರ, ಬಸವರಾಜ ಹುಂದ್ರಿ, ಮಾಜಿ ಶಾಸಕ ಅನಿಲ್ ಬೆನಕೆ, ಎಂ.ಬಿ. ಜಿರಲಿ, ಮಾಜಿ ಶಾಸಕ ಸಂಜಯ್ ಪಾಟೀಲ, ಮಹೇಶ ಕುಮಟಳ್ಳಿ, ಮುರಗೇಂದ್ರಗೌಡ ಪಾಟೀಲ, ಅರವಿಂದ ಪಾಟೀಲ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಬ್ಬದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ
ಪ್ರತಿಭಾವಂತ ಗಾಯಕರಿಗೆ ವೇದಿಕೆ ಕಲ್ಪಿಸಲು ರಾಜ್ಯಮಟ್ಟ ಕಾರ್ಯಕ್ರಮ