56 ಪ್ರಕರಣಗಳಲ್ಲಿ 30 ಆರೋಪಿಗಳ ಬಂಧನ

KannadaprabhaNewsNetwork |  
Published : Oct 06, 2023, 01:10 AM IST
ದೊಡ್ಡಬಳ್ಳಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು, ಸರಗಳ್ಳತನ, ಗಾಂಜಾ ಪ್ರಕರಣ ಸೇರಿದಂತೆ 56 ಕೇಸುಗಳನ್ನು ಬೇಧಿಸಿರುವ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು, ಸರಗಳ್ಳತನ, ಗಾಂಜಾ ಪ್ರಕರಣ ಸೇರಿದಂತೆ 56 ಕೇಸುಗಳನ್ನು ಬೇಧಿಸಿರುವ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಮಾಲು ವಶಪಡಿಸಿಕೊಂಡಿದ್ದಾರೆ. ಪ್ರಕರಣಗಳ ಕುರಿತು ದೊಡ್ಡಬಳ್ಳಾಪುರ ನಗರ ಡಿವೈಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ವಿವಿಧ ಠಾಣೆಗಳಲ್ಲಿ ಬೇಧಿಸಿರುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಕಳುವಾಗಿರುವ ಮಾಲುಗಳ ಪತ್ತೆಗೆ ಉಪ ವಿಭಾಗ ಮಟ್ಟದಲ್ಲಿ ಎಎಸ್ಪಿ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ರವಿ, ಪಿ ಮಾರ್ಗದರ್ಶನದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಗಳ ಬೆನ್ನ ಹತ್ತಿದ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಸುಮಾರು 1.20 ಕೋಟಿಗೂ ಹೆಚ್ಚು ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ರವಿ ಸೇರಿದಂತೆ ಎಲ್ಲ ಠಾಣೆಗಳ ಪಿಐ ಗಳು, ಪಿಎಸ್‌ಐಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. 5ಕೆಡಿಬಿಪಿ3- ದೊಡ್ಡಬಳ್ಳಾಪುರ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಬಂಧಿಸಿರುವ 30 ಆರೋಪಿಗಳಿಂದ ವಶಪಡಿಸಿಕೊಂಡಿರುವ ವಸ್ತುಗಳು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ