ಕನ್ನಡಪ್ರಭ ವಾರ್ತೆ ಮುಧೋಳ
ಮಂಗಳವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗಿಂತ ಈಗ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲುವುದನ್ನು ಮನಗಂಡಿರುವ ಕಾಂಗ್ರೆಸ್ ನಾಯಕರಿಗೆ ಆತಂಕ ಶುರುವಾಗಿದೆ. ಇಂಡಿಯಾ ಒಕ್ಕೂಟ ಚುನಾವಣೆ ಮುನ್ನವೇ ಛಿತ್ರಗೊಳ್ಳಲಿದೆ. ಕಾಂಗ್ರೆಸ್ ಪಕ್ಷ ಆರಂಭದಿಂದಲೂ ದಲಿತ ವಿರೋಧಿ ನೀತಿ ಅನುಸರಿಸುತ್ತಾ ಬಂದಿದೆ. ಮಮತಾ ಬ್ಯಾನರ್ಜಿ, ಕ್ರೇಜಿವಾಲ್ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಯಾಗಲಿ ಎಂದು ಹೇಳಿದರೆ ಸಿದ್ದರಾಮಯ್ಯನವರು ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಹೇಳಿದರು.
ಡಾ.ಅಂಬೇಡ್ಕರ್, ಜಗಜೀನರಾಂ ಅವರಿಗೆ ಕಾಂಗ್ರೆಸ್ ಅವಮಾನ ಮಾಡಿದಂತೆ ಪರಮೇಶ್ವರ ಹಾಗೂ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗದಂತೆ ಕಾಂಗ್ರೆಸ್ ದಲಿತ ವಿರೋಧಿ ನಿಲುವು ಹೊಂದಿತ್ತು ಎಂದು ಆರೋಪಿಸಿದರು.7 ತಿಂಗಳಾದರೂ ಅನುದಾನ ತಂದಿಲ್ಲ:
ಕೇಂದ್ರದ ಮೇಲೆ ಆರೋಪ ಸರಿಯಲ್ಲ:
ಸಾಲಮನ್ನಾ ಮಾಡಲಿ:
ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳುವ ಮುಖ್ಯಮಂತ್ರಿಗಳು ಬರವನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ರಾಜ್ಯದ 1,72,9000 ರೈತರಿಗೆ ಬಡ್ಡಿ ರಹಿತವಾಗಿ ₹13,408 ಕೋಟಿ ಸಾಲ ನೀಡಲಾಗಿದೆ. ಇದರಲ್ಲಿ ಕನಿಷ್ಠ ಅರ್ಧದಷ್ಟು ಸಾಲಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದರು.ಈ ವೇಳೆ ಬಿಜೆಪಿ ಮುಖಂಡರಾದ ಕೆ.ಆರ್.ಮಾಚಪ್ಪನವರ, ಕಲ್ಲಪ್ಪಣ್ಣ ಸಬರದ, ಹನಮಂತ ತುಳಸಿಗೇರಿ, ಡಾ.ರವಿ ನಂದಗಾಂವ, ಕುಮಾರ ಹುಲಕುಂದ, ನಾಗಪ್ಪ ಅಂಬಿ, ಬಸವರಾಜ ಮಳಲಿ, ಸೋನಾಪ್ಪಿ ಕುಲಕರ್ಣಿ, ಡಾ.ಸುಮೇದಾ ಮಾನೆ, ಸದಪ್ಪ ತೇಲಿ, ಸಂತೋಷ ಘೋರ್ಪಡೆ, ಮಾರುತಿ ಆನಿ, ಬಂಡು ಘಾಟಗೆ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಬಾಕ್ಸ್
20 ದಿನ ನೀರು ಹರಿಸಿ:ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಕೇವಲ 10 ದಿನಗಳವರೆಗೆ ನೀರು ಹರಿಸಿದರೆ ಅದು ಕೇವಲ ಬೆಳಗಾವಿ ಜಿಲ್ಲೆಯವರಿಗೆ ಮಾತ್ರ ಪ್ರಯೋಜನವಾಗಲಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ಜನರು ನೀರಿನಿಂದ ವಂಚಿತರಾಗುವುದು ಖಚಿತ. ಅದಕ್ಕಾಗಿ ಬಾಗಲಕೋಟೆ ಜಿಲ್ಲೆಯ ಕೊನೆಯ ಗ್ರಾಮದ ರೈತರಿಗೂ ನೀರು ತಲುಪಿಸಲು ಇನ್ನೂ 20 ದಿನದವರೆಗೆ ನೀರನ್ನು ಹರಿಸಬೇಕೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಗ್ರಹಿಸಿದರು.
ಕೋಟ್
ಬರಗಾಲದಿಂದ ರೈತಾಪಿ ವರ್ಗ ತೀವ್ರ ಸಂಕಷ್ಟದಲ್ಲಿದೆ. ಉಳಿದಿರುವ ಬೆಳೆ ಸಂರಕ್ಷಣೆಗೆ ಕುಡಿಯುವ ನೀರಿಗಾಗಿ 20 ದಿನ ಹರಿಸುವುದು 30 ವರ್ಷಗಳಿಂದ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿ ಜವಾಬ್ದಾರಿಯಿಂದ ನಡೆದುಕೊಂಡು 20 ದಿನಗಳವೆರೆಗೆ ನೀರನ್ನು ಬಿಡಿಸಬೇಕಿತ್ತು ಎಂದರು.--
-ಗೋವಿಂದ ಕಾರಜೋಳ, ಮಾಜಿ ಡಿಸಿಎಂ