ಮನೆ ಕಳ್ಳತನ ಮಾಡಿದ್ದ ಕಳ್ಳನ ಬಂಧನ: ಬೈಕ್‌, ಚಿನ್ನಾಭರಣ ವಶ

KannadaprabhaNewsNetwork |  
Published : Jan 10, 2025, 12:46 AM IST
ಬಂಧನ | Kannada Prabha

ಸಾರಾಂಶ

ಸಿಂದಗಿ: ಸಿಂದಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆಗಳ ಕಳ್ಳತನ ನಡೆಸಿದ್ದ ಕಳ್ಳನನ್ನು ಬಂಧಿಸುವಲ್ಲಿ ಸಿಂದಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ರಾಜನಕೂಳೂರು ಗ್ರಾಮದ ನಿಂಗಪ್ಪ ರಾಜಪ್ಪ ಬಡಿಗೇರ ಬಂಧಿತ ಕಳ್ಳನಾಗಿದ್ದು, ಈತ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣ ಸೇರಿದಂತೆ ತಾಲೂಕಿನ ಕೊಕಟನೂರು, ಸುಂಗಠಾಣ ಗ್ರಾಮಗಳಲ್ಲಿ ಮನೆಗಳ ಕಳ್ಳತನ ನಡೆಸಿದ್ದನು. ಅಲ್ಲದೇ, ವಿಚಾರಣೆ ವೇಳೆ ಕಳ್ಳತನ ಮಾಡಿದ್ದಾಗಿ ಆತನೇ ಒಪ್ಪಿಕೊಂಡಿದ್ದಾನೆ.

ಪಟ್ಟಣದಲ್ಲಿ ಬುಧವಾರ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದಾಗ ಈತನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ನಾನೇ ಕಳ್ಳತನ ಮಾಡಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾನೆ. ಪಟ್ಟಣದ ಕಲ್ಯಾಣ ನಗರ, ಮಲ್ಲಿಕಾರ್ಜುನ್ ನಗರ ಹಾಗೂ ತಾಲೂಕಿನ ಸುಂಗಠಾಣ ಮತ್ತು ಕೊಕಟನೂರು ಗ್ರಾಮದಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಒಂದು ಬೈಕ್, 105 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಸಿಂದಗಿ ಸಿಪಿಐ ನಾನಾಗೌಡ ಪೊಲೀಸಪಾಟೀಲ, ಪಿಎಸ್ಐ ಆರಿಫ್ ಮುಷಾಪುರಿ ಸೇರಿ ಠಾಣೆಯ ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ