ನಿಷೇಧಿತ ಇ-ಸಿಗರೆಟ್‌ ಮಾರುತ್ತಿದ್ದವರ ಸೆರೆ

KannadaprabhaNewsNetwork |  
Published : May 18, 2024, 01:30 AM IST
ಸಿಗರೆಟ್‌ | Kannada Prabha

ಸಾರಾಂಶ

ನಿಷೇಧಿತ ಇ-ಸಿಗರೆಟ್‌ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿಷೇಧಿತ ಇ-ಸಿಗರೆಟ್‌ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುಲಕೇಶಿನಗರದ ಕೋಲ್ಸ್‌ ರಸ್ತೆಯ ಆಲ್‌ ಅಬ್ರಾ ಗಿಫ್ಟ್‌ ಅಂಗಡಿಯಲ್ಲಿ ನಿಷೇಧಿತ ವಿದೇಶಿ ಇ-ಸಿಗರೆಟ್ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅಂಗಡಿ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ದಾಳಿ ವೇಳೆ ₹1 ಲಕ್ಷ ಮೌಲ್ಯದ 225 ಪ್ಯಾಕ್‌ ವಿದೇಶಿ ಸಿಗರೇಟ್‌ಗಳು, 7 ವಿದೇಶಿ ಸಿಗರೆಟ್‌ ಬಾಕ್ಸ್‌ಗಳು, 130 ಇ-ಸಿಗರೆಟ್‌, 110 ಇ-ಸಿಗರೆಟ್‌ ಪ್ಲೇವರ್‌ಗಳು ಹಾಗೂ ₹1,400 ನಗದು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮತ್ತೊಂದು ಪ್ರಕರಣದಲ್ಲಿ ಇಂದಿರಾನಗರದ ಸಿಎಂಎಚ್‌ ರಸ್ತೆಯ ಅಂಗಡಿಯಲ್ಲಿ ಅಕ್ರಮವಾಗಿ ನಿಷೇಧಿತ ಇ-ಸಿಗರೆಟ್‌ ದಾಸ್ತಾನು ಮಾಡಿಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ₹2.50 ಲಕ್ಷ ಮೌಲ್ಯದ 250 ಇ-ಸಿಗರೆಟ್ ಜಪ್ತಿ ಮಾಡಲಾಗಿದೆ. ಈ ಸಂಬಂಧ ಇಂದಿರಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಗಲಕೋಟೆ: ಮತ್ತೆ ಚರಂತಿಮಠ, ಮೇಟಿ ಕುಟುಂಬ ಮಧ್ಯೆ ಫೈಟ್‌
ಗರ್ಭಿಣಿ ಜೊತೆ ಪುತ್ರನ ಅನೈತಿಕ ಸಂಬಂಧ- ಸಾಮಾಜಿಕ ಬಹಿಷ್ಕಾರಕ್ಕೆ ನೊಂದ ಮಹಿಳೆ ಆತ್ಮ*ತ್ಯೆ