ಇಬ್ಬರು ಮನೆಗಳ್ಳರ ಸೆರೆ

KannadaprabhaNewsNetwork |  
Published : Nov 05, 2023, 01:15 AM IST

ಸಾರಾಂಶ

ಕನಕಪುರ: ನಗರದ ಬಸವೇಶ್ವರ ಬಡಾವಣೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ನಗರ ಠಾಣಾ ಪೊಲೀಸರು ಬಂಧಿಸಿ 17 ಲಕ್ಷ ರು. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು ಸೇರಿದಂತೆ ಕಳ್ಳತನಕ್ಕೆ ಬಳಸಿದ್ದ ದ್ವಿಚಕ್ರ ವಾಹನವಶಪಡಿಸಿಕೊಂಡಿದ್ದಾರೆ.

ಕನಕಪುರ: ನಗರದ ಬಸವೇಶ್ವರ ಬಡಾವಣೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ನಗರ ಠಾಣಾ ಪೊಲೀಸರು ಬಂಧಿಸಿ 17 ಲಕ್ಷ ರು. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು ಸೇರಿದಂತೆ ಕಳ್ಳತನಕ್ಕೆ ಬಳಸಿದ್ದ ದ್ವಿಚಕ್ರ ವಾಹನ

ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಮೆಹೆಂದಿ ನಗರದ ಗಾರೆ ಕೆಲಸದ ಕಾರ್ಮಿಕ ಮಹಮ್ಮದ್ ಅಲಿ(30), ಬೆಂಗಳೂರು ನಗರದ ನೀಲಸಂದ್ರದ ಮುನಿಸ್ವಾಮಿ ಲೇಔಟ್‍ನ ಮೆಕಾನಿಕ್ ಕೆಲಸಗಾರ ಮಜಾದ್ ಅಲಿ (44) ಬಂಧಿತರು. ಕನಕಪುರ ನಗರದ ಬಸವೇಶ್ವರ ಬಡಾವಣೆಯಲ್ಲಿ ಮೇ 15ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಆರೋಪಿಗಳು 4 ಕಡೆ ಕಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಖಚಿತ ಮಾಹಿತಿ ಆಧಾರದ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ