ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮಾತ್ರವಲ್ಲದೆ ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಬಿಜೆಪಿ ನಾಯಕ ಅಮಿತ್ ಶಾ ಆಗಮಿಸುತ್ತಿದ್ದಾರೆ. ಅವರ ಆಗಮನದಿಂದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರಿಗೆ ಹೊಸ ಶಕ್ತಿ ಬರಲಿದೆ ಎಂದು ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.
ಅಮಿತ್ ಶಾ ಅವರೊಂದಿಗೆ ಬಿಜೆಪಿ ರಾಜ್ಯ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.ಬಾಕ್ಸ್..............
ಏ.4ಕ್ಕೆ ನಾಮಪತ್ರ ಸಲ್ಲಿಕೆರಾಮನಗರ: ಏ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ. ಬಿಜೆಪಿ - ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಮೆರವಣಿಗೆ, ಸಮಾವೇಶದ ಕುರಿತು ರೂಪುರೇಷೆ ಮಾಡಲಾಗುತ್ತಿದೆ ಎಂದು ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.ಬಾಕ್ಸ್...........ಎಚ್ಡಿಕೆ ಶಸ್ತ್ರಚಿಕಿತ್ಸೆ ವಿಚಾರಕ್ಕೆ ಶಾಸಕ
ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಅನುಮಾನ ವ್ಯಕ್ತಪಡಿಸಿರುವ ಶ್ರೀರಂಗಪಟ್ಟಣ ಕ್ಷೇತ್ರ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಂಜುನಾಥ್, ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಮಾಡುವಾಗ ನಾನು ಇದ್ದೆ. ಆಧುನಿಕ ತಂತ್ರಜ್ಞಾನದಲ್ಲಿ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದೆ. ಸರಿಯಾದ ಮಾಹಿತಿ ಇಲ್ಲದೆ ಯಾರೂ ಯಾವುದರ ಬಗ್ಗೆಯೂ ಮಾತನಾಡಬಾರದು ಎಂದು ಶ್ರೀರಂಗಪಟ್ಟಣ ಕ್ಷೇತ್ರ ಶಾಸಕ ರಮೇಶ್ ಬಂಡಿಸಿದ್ದೇಗೌಡರಿಗೆ ತಿರುಗೇಟು ನೀಡಿದರು.
ಕುಮಾರಸ್ವಾಮಿ ಅವರಿಗೆ 2007ರಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿ ಕವಾಟ ಜೋಡಿಸಲಾಗಿದೆ. 2017ರಲ್ಲಿ ಎರಡನೇ ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಇದೀಗ ಮೂರನೇ ಬಾರಿ ಆಧುನಿಕ ತಂತ್ರಜ್ಞಾನ ಬಳಸಿ ಕಾಲಿನ ರಕ್ತನಾಳದ ಮೂಲಕ ಕವಾಟ ಬದಲಾಯಿಸಲಾಗಿದೆ. ಆಂಜಿಯೋಗ್ರಾಂ ತಂತ್ರಜ್ಞಾನ ಬಳಸಿ ಮಾಡುವ ಈ ಶಸ್ತ್ರ ಚಿಕಿತ್ಸೆಯನ್ನು ಟಾವಿ ಎನ್ನಲಾಗುತ್ತದೆ. ನಾನು ಸಹ ಇಂತಹ ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದೇನೆ ಎಂದು ಹೇಳಿದರು.
31ಕೆಆರ್ ಎಂಎನ್ 7.ಜೆಪಿಜಿ