ಕಾರಲ್ಲಿ ಬಂದು ಅಪಾರ್ಟ್‌ಮೆಂಟ್‌ಗೆ ನುಗ್ಗಿ 1.35 ಲಕ್ಷದ ಶೂಗಳ ಕದ್ದರು

KannadaprabhaNewsNetwork |  
Published : Jun 29, 2026, 03:45 AM IST
Byappanahalli

ಸಾರಾಂಶ

ಕಾರಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ದುಬಾರಿ ಬೆಲೆಯ, ಪ್ರತಿಷ್ಠಿತ ಕಂಪನಿಗಳ ₹1.35 ಲಕ್ಷ ಮೌಲ್ಯದ ಶೂಗಳನ್ನು ಕಳ್ಳತನ ಮಾಡಿರುವ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

  ಬೆಂಗಳೂರು :  ಕಾರಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ದುಬಾರಿ ಬೆಲೆಯ, ಪ್ರತಿಷ್ಠಿತ ಕಂಪನಿಗಳ ₹1.35 ಲಕ್ಷ ಮೌಲ್ಯದ ಶೂಗಳನ್ನು ಕಳ್ಳತನ ಮಾಡಿರುವ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಜು.24ರಂದು ಬೆಳಗಿನ ಜಾವ 4.30 ರ ಸುಮಾರಿಗೆ ಕಳ್ಳತನ

ಜು.24ರಂದು ಬೆಳಗಿನ ಜಾವ 4.30 ರ ಸುಮಾರಿಗೆ ಸದಾನಂದನಗರದ ಶ್ರೀಧಾಮ ಅಪಾರ್ಟ್‌ಮೆಂಟ್‌ ಬಳಿ ಇಬ್ಬರು ಆರೋಪಿಗಳು ಕಾರಿನಲ್ಲಿ ಬಂದಿದ್ದು, ಈ ಪೈಕಿ ಓರ್ವ ಅಪಾರ್ಟ್‌ಮೆಂಟ್‌ನ ಒಳಗೆ ಬಂದು ಹಲವೆಡೆ ಸುತ್ತಾಡಿ ಒಟ್ಟಾರೆ 1.35 ಲಕ್ಷ ರು. ಮೌಲ್ಯದ ಪೂಮಾ ಸೇರಿದಂತೆ ವಿವಿಧ ಬ್ರ್ಯಾಂಡ್‌ನ 27 ಜೊತೆ ಶೂಗಳನ್ನು ಕದ್ದು ಚೀಲದೊಳಗೆ ತುಂಬಿಕೊಂಡಿದ್ದು ಬಳಿಕ ಅಪಾರ್ಟ್‌ಮೆಂಟ್‌ ಹೊರಗೆ ಕಾರಿನಲ್ಲಿ ಕಾಯುತ್ತಿದ್ದ ಮತ್ತೊಬ್ಬ ಆರೋಪಿಯೊಂದಿಗೆ ಪರಾರಿಯಾಗಿದ್ದಾನೆ.  

ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಜೆಡಿಎಸ್‌ ಕಾರ್ಯಕರ್ತರಿಗಾಗಿ ಎಸ್‌ಐಆರ್‌ ಕಾರ್ಯಾಗಾರ: ದೇವಾನಂದ ಚವ್ಹಾಣ
ವರುಣನ ಕೃಪೆಗಾಗಿ ಇಂದ್ರ ಹೋಮ ವಿಶೇಷ ಪೂಜೆ