ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ಅಗತ್ಯ: ಚನ್ನಕೇಶವ

KannadaprabhaNewsNetwork |  
Published : Sep 24, 2025, 01:00 AM IST
೨೩ಬಿಹೆಚ್‌ಆರ್ ೨: ಬಾಳೆಹೊನ್ನೂರಿನ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ವತಿಯಿಂದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಮಿತಿಯ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಉದ್ಘಾಟಿಸಿದರು. ಭಾಸ್ಕರ್ ವೆನಿಲ್ಲಾ, ಆರ್.ಡಿ.ಮಹೇಂದ್ರ, ಚೈತನ್ಯ ವೆಂಕಿ, ನಾಗರಾಜ್, ಸತೀಶ್, ಪ್ರಭಾಕರ್, ಕೃಷ್ಣಮೂರ್ತಿ ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರು , ಭಾರತದ ನೆಲೆಗಟ್ಟಾದ ಕಲೆ, ಸಂಸ್ಕೃತಿ, ಧಾರ್ಮಿಕತೆಗೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಿ ಬೆಳೆಸಬೇಕಿದೆ ಎಂದು ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಬರಗಲ್ ಹೇಳಿದರು.

ದುರ್ಗಾದೇವಿ ಶರನ್ನವರಾತ್ರಿದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಭಾರತದ ನೆಲೆಗಟ್ಟಾದ ಕಲೆ, ಸಂಸ್ಕೃತಿ, ಧಾರ್ಮಿಕತೆಗೆ ಪ್ರತಿಯೊಬ್ಬರು ಪ್ರೋತ್ಸಾಹ ನೀಡಿ ಬೆಳೆಸಬೇಕಿದೆ ಎಂದು ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಬರಗಲ್ ಹೇಳಿದರು.ಪಟ್ಟಣದ ಮಾರ್ಕಾಂಡೇಶ್ವರ ದೇವಸ್ಥಾನದ ಮೃತ್ಯಂಬಿಕಾ ಅಮ್ಮನವರ ವೇದಿಕೆಯಲ್ಲಿ 16ನೇ ವರ್ಷದ ದುರ್ಗಾದೇವಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೋಮವಾರ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.ನವರಾತ್ರಿ ಸಂದರ್ಭದಲ್ಲಿ ನಾಡಿನ ಕಲೆ, ಸಂಸ್ಕೃತಿ, ವಿವಿಧ ಗ್ರಾಮೀಣ ಕಲಾ ಪ್ರಕಾರಗಳನ್ನು ನಾಡಿಗೆ ಪರಿಚಯಿಸಿ, ಪ್ರತಿಭೆಗಳಿಗೆ ಉತ್ತಮ ವೇದಿಕೆ ಒದಗಿಸುವ ಕೆಲಸವನ್ನು ನವರಾತ್ರಿ ಸಮಿತಿ ಮಾಡುತ್ತಿದೆ. 11 ದಿನಗಳ ಪರ್ಯಂತ ಧರ್ಮಾವಲಂಬಿತ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದರು. ಸಮಿತಿಯ ಕೋಶಾಧಿಕಾರಿ ಭಾಸ್ಕರ್ ವೆನಿಲ್ಲಾ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಕಲೆ, ಸಂಸ್ಕೃತಿ ನಶಿಸುತ್ತಿರುವ ದಿನಗಳಲ್ಲಿ ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವಂತಹ ಕಾರ್ಯಕ್ರಮ ನಡೆಸುವುದು ಧಾರ್ಮಿಕ ಸಂಘ ಸಂಸ್ಥೆಗಳ ಮೇಲಿದ್ದು, ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಾರತೀಯ ಸನಾತನ ಸಂಸ್ಕೃತಿ, ಸಂಪ್ರದಾಯ ತಿಳಿದುಕೊಳ್ಳಬೇಕಿದೆ ಎಂದರು. ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಜಂಟಿ ಕಾರ್ಯದರ್ಶಿ ಪ್ರಭಾಕರ್ ಪ್ರಣಸ್ವಿ, ಸಹ ಕೋಶಾಧಿಕಾರಿ ಚೈತನ್ಯ ವೆಂಕಿ, ಕಾನೂನು ಸಲಹೆಗಾರ ಎಚ್.ಎಚ್.ಕೃಷ್ಣಮೂರ್ತಿ, ಪ್ರಮುಖರಾದ ಎಚ್.ಡಿ.ಸತೀಶ್, ನಾಗರಾಜ್ ಬರಗಲ್, ಕೆ.ಪ್ರಶಾಂತ್‌ಕುಮಾರ್, ಡಿ.ಎನ್.ಸುಧಾಕರ್, ಕೆ.ನಾರಾಯಣಶೆಟ್ಟಿ, ಗಿರೀಶ್ ಬಂದಿಯಡ್ಕ, ಈಶ್ವರ್ ಇಟ್ಟಿಗೆ, ನಟರಾಜ್ ಶೆಟ್ಟಿ ಮತ್ತಿತರರು ಇದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಆರಂಭಕ್ಕೂ ಮುನ್ನ ಸ್ಥಳೀಯ ಗಾಯಕ ಪ್ರಕಾಶ್ ಆಚಾರ್ಯ ಮತ್ತು ಸಂಗಡಿಗರಿಂದ ಭಜನಾ ಕಾರ್ಯಕ್ರಮ ಸೇವೆಗೆ ಚಾಲನೆ ನೀಡಲಾಯಿತು. ನಂತರ ಸ್ಥಳೀಯ ಕಲಾವಿದರು, ವಿದ್ಯಾರ್ಥಿಗಳಿಂದ ನೃತ್ಯ ಸಂಗೀತ ಕಾರ್ಯಕ್ರಮ ನಡೆಯಿತು.-- (ಬಾಕ್ಸ್)--

ಇಂದು ಕೌಮಾರೀ ಪೂಜಾ ಪಾರಾಯಣ ಬಾಳೆಹೊನ್ನೂರು: ದುರ್ಗಾ ಪೂಜಾ ಮಹೋತ್ಸವದ ಅಂಗವಾಗಿ ಸೆ.24ರ ಬುಧವಾರ ದೇವಿ ಸನ್ನಿಧಿಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮಯೂರವಾಹಿನಿ, ಕೌಮಾರೀ ಪೂಜಾ ಪಾರಾಯಣ ನಡೆಯಲಿದೆ. ಮಧ್ಯಾಹ್ನ 12 ಗಂಟೆಯಿಂದ 15 ವರ್ಷದೊಳಗಿನ ಮಕ್ಕಳಿಗೆ ಹಿಂದೂ ದೇವಾನುದೇವತೆಗಳ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ.ಸಂಜೆ 6ರಿಂದ 7.45ರವರೆಗೆ ಭಕ್ತಾದಿಗಳಿಂದ ವಿವಿಧ ಪೂಜಾ ಸೇವೆ, ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 8ರಿಂದ ಸ್ಥಳೀಯ ಕಲಾವಿದರಿಂದ ಭರತನಾಟ್ಯ ವೈವಿಧ್ಯ ನಡೆಯಲಿದೆ.

೨೩ಬಿಹೆಚ್‌ಆರ್ ೨: ಬಾಳೆಹೊನ್ನೂರಿನ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿಯಿಂದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಮಿತಿ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಉದ್ಘಾಟಿಸಿದರು. ಭಾಸ್ಕರ್ ವೆನಿಲ್ಲಾ, ಆರ್.ಡಿ.ಮಹೇಂದ್ರ, ಚೈತನ್ಯ ವೆಂಕಿ, ನಾಗರಾಜ್, ಸತೀಶ್, ಪ್ರಭಾಕರ್, ಕೃಷ್ಣಮೂರ್ತಿ ಇದ್ದರು.

PREV

Recommended Stories

ಪಾಲಿಕೆಗಳ ಚುನಾವಣೆ ಮುಗಿವವರೆಗೆ ಬೆಂಗಳೂರಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ : ಕೇಂದ್ರ ಆಯುಕ್ತರಿಗೆ ಪತ್ರ
ಡ್ರಾಪ್‌ ನೆಪದಲ್ಲಿ ಗುತ್ತಿಗೆದಾರನ ದರೋಡೆ ಮಾಡಿದ್ದ ನಾಲ್ವರ ಬಂಧನ