ಗ್ರಾಮ ಸಾಹಿತ್ಯದಿಂದ ಪ್ರತಿಭೆಗಳಿಗೆ ಅವಕಾಶ : ಡಾ. ಧರ್ಮಪಾಲ

KannadaprabhaNewsNetwork |  
Published : Sep 22, 2026, 02:45 AM IST
ಫೋಟೋ: ೨೧ಪಿಟಿಆರ್- ಸಾಹಿತ್ಯ ೧ಗ್ರಾಮ ಸಾಹಿತ್ಯ ಸಂಭ್ರಮವನ್ನು ಬೆಟ್ಟಂಪಾಡಿ ಗ್ರಾಪಂ ಆಡಳಿತಾಧಿಕಾರಿ ಡಾ. ಧರ್ಮಪಾಲ ಉದ್ಘಾಟಿಸಿದರು. ಫೋಟೋ: ೨೧ಪಿಟಿಆರ್- ಸಾಹಿತ್ಯ ೨ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಗ್ರಾಮದ ಸಾಧಕರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಟ್ಟಂಪಾಡಿಯ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕನ್ನಡ ಸಂಘ ಇವರ ಸಹಕಾರದಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅವರ ಪ್ರಾಯೋಜಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನ

ಪುತ್ತೂರು: ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಗ್ರಾಮ ಸಾಹಿತ್ಯ ಸಂಭ್ರಮ ದಂತಹ ಕಾರ್ಯಕ್ರಮಗಳು ಉತ್ತಮ ಅವಕಾಶವನ್ನು ಒದಗಿಸುತ್ತಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಳಿಗೇ ಸಾಹಿತ್ಯವನ್ನು ಕೊಂಡೊಯ್ದು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಡಾ. ಧರ್ಮಪಾಲ ಹೇಳಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಟ್ಟಂಪಾಡಿಯ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕನ್ನಡ ಸಂಘ ಇವರ ಸಹಕಾರದಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅವರ ಪ್ರಾಯೋಜಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-೨೧ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಟ್ಟಂಪಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ರಜಾಕ್ ಕೆ. ಮಾತನಾಡಿದರು. ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಅವರು ‘ಕನ್ನಡ ಸಾಹಿತ್ಯ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಂದ್ರ ರೈ, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ನವೀನ್ ರೈ ಚೆಲ್ಯಡ್ಕ, ಚಿಗುರೆಲೆ ಸಾಹಿತ್ಯ ಬಳಗದ ಅಧ್ಯಕ್ಷ ಚಂದ್ರಮೌಳಿ ಕಡಂದೇಲು, ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಶಾಲಿನಿ ಬಿ. ಶೆಟ್ಟಿ ಮತ್ತು ನಾರಾಯಣ ಡಿ. ಇದ್ದರು.

ಪ್ರಾಂಶುಪಾಲ ದಾಮೋದರ ಕಣಜಾಲು ಸ್ವಾಗತಿಸಿದರು. ಗ್ರಾಮ ಸಾಹಿತ್ಯ ಸಂಭ್ರಮದ ಸಂಯೋಜಕ ನಾರಾಯಣ ಕುಂಬ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್ಲಪದವು ಗಡಿನಾಡು ಶ್ರೇಯೋಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಹಾಜಿ ಅಬೂಬಕ್ಕರ್ ಆರ್ಲಪದವು ಸನ್ಮಾನ ಭಾಷಣ ಮಾಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ. ವಿದ್ಯಾರ್ಥಿನಿ ವೇದಾವತಿ ಬಿ. ಸಾಹಿತ್ಯ ಸಂಭ್ರಮದ ಸರ್ವಾಧ್ಯಕ್ಷತೆ ವಹಿಸಿದ್ದರು. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಪ್ರನ್ವಿ ಪ್ರಸಾದ್ ಸಮಾರೋಪ ಭಾಷಣ ಮಾಡಿದರು.

ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೫ ಶಾಲೆಗಳಲ್ಲಿ ಶಾಲಾ ಮಟ್ಟದಲ್ಲಿ ವಿವಿಧ ಸಾಹಿತ್ಯಿಕ ಗೋಷ್ಠಿಗಳನ್ನು ನಡೆಸಲಾಗಿತ್ತು. ಒಟ್ಟು ೧೫ ಶಾಲೆಗಳ ಸುಮಾರು ೨೦೩ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಮೂಡಿಸುವ ಹಿನ್ನೆಲೆಯಲ್ಲಿ ಕವಿಗೋಷ್ಠಿ, ಕಥಾಗೋಷ್ಠಿ, ಪ್ರವಾಸ ಕಥನ, ನನ್ನ ಆಪ್ತಮಿತ್ರ ಹಾಗೂ ನನ್ನ ನೆಚ್ಚಿನ ಶಿಕ್ಷಕಿ/ಶಿಕ್ಷಕ ಸೇರಿದಂತೆ ವಿವಿಧ ಸಾಹಿತ್ಯಿಕ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಇರ್ದೆ ಮತ್ತು ಬೆಟ್ಟಂಪಾಡಿ ಗ್ರಾಮದ ವಿವಿಧ ಕ್ಷೇತ್ರಗಳ ೧೬ ಸಾಧಕರಾದ ಸಾಹಿತ್ಯ ಕ್ಷೇತ್ರದ ಮಂಜುಳಗಿರಿ ವೆಂಕಟರಮಣ ಭಟ್, ಪತ್ರಿಕಾ ಮಾಧ್ಯಮ ಕ್ಷೇತ್ರದ ಉಮೇಶ್ ಗೌಡ ಮಿತ್ತಡ್ಕ, ಜನಪದ ಕ್ಷೇತ್ರದ ಚೋಮ ಬೆಟ್ಟಂಪಾಡಿ, ಇತಿಹಾಸ ಅಧ್ಯಯನ ಮತ್ತು ಸಂಶೋಧನಾ ಕ್ಷೇತ್ರದ ಡಾ. ಪ್ರಮೋದ್ ಕುಮಾರ್ ಎಂ.ಜಿ., ನಾಟಿ ವೈದ್ಯಕೀಯ ಕ್ಷೇತ್ರದ ಕೈಜಮ್ಮ ಕೋನಡ್ಕ, ಶಿಕ್ಷಣ ಕ್ಷೇತ್ರದ ಯು. ದೇವಪ್ಪ ನಾಯ್ಕ ಉಪ್ಪಳಿಗೆ, ಕೃಷಿ ಕ್ಷೇತ್ರದ ಅನಿತಾ ಕೂವೆಂಜ ಮತ್ತು ಸುಬ್ಬಣ್ಣ ಗೌಡ ಪಾರ, ದಿವ್ಯಾಂಗರ ಸೇವೆಯ ಶಶಿಕಲಾ, ವೈದ್ಯಕೀಯ ಕ್ಷೇತ್ರದ ಡಾ. ಶ್ರೀಕೃಷ್ಣ ಭಟ್, ಯಕ್ಷಗಾನ ಕ್ಷೇತ್ರದ ಸಂಜೀವ ರೈ ಅರೆಂಬ್ಯ, ಸಹಕಾರ ಮತ್ತು ಶಿಕ್ಷಣ ಕ್ಷೇತ್ರದ ಕೆ.ಎಸ್. ರಂಗನಾಥ ರೈ ಗುತ್ತು, ಸಮಾಜ ಸೇವಾ ಕ್ಷೇತ್ರದ ಮೊಯಿದಿನ್ ಕುಂಞ, ಚಿತ್ರಕಲಾ ಕ್ಷೇತ್ರದ ಐ. ಗೋಪಾಲಕೃಷ್ಣ ರಾವ್, ವಂಶ ಪಾರಂಪರಿಕ ಜ್ಯೋತಿಷ್ಯ ಹಾಗೂ ಪೌರೋಹಿತ್ಯ ಕ್ಷೇತ್ರದ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಹಾಗೂ ಕ್ರೀಡಾ ಕ್ಷೇತ್ರದ ದಯಾನಂದ ರೈ ಕೋರ್ಮಂಡ ಅವರನ್ನು ಗೌರವಿಸಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ವಿಶೇಷ ಸಾಧಕ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು.

ಆಶಾಮಯ್ಯ ಮತ್ತು ಆಶಾ ಅಡೂರ್ ಅವರು ಸಾಧಕರ ಪರಿಚಯ ಮಾಡಿದರು. ಶ್ರೀಶ ವಾಸವಿ ತುಳುನಾಡು ವಂದಿಸಿದರು. ಸುಪ್ರಿತ ಚರಣ್ ಪಾಲಪ್ಪೆ, ಅಶ್ವಿಜ ಶ್ರೀಧರ್ ಬೆಳ್ತಂಗಡಿ ಮತ್ತು ಗಿರೀಶ್ ಕೊಯಿಲ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರ್ನಾಡಿನಲ್ಲಿ ವಿಜೃಂಭಣೆಯ ಗಣೇಶ ವಿಸರ್ಜನಾ ಮಹೋತ್ಸವ
ಕುಶಾಲನಗರ ಆನೆಕಾಡು: ಸರಣಿ ಅಪಘಾತಕ್ಕೆ ಮೂವರು ಬಲಿ