ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆಯ ಸಭಾಭವನದಲ್ಲಿ ಶನಿವಾರ ಕನ್ನಡಪ್ರಭ ಪತ್ರಿಕೆ ಹಮ್ಮಿಕೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂದಗಿ, ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆ ದೇವರಹಿಪ್ಪರಗಿ ಸಹಯೋಗದೊಂದಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲೆ ಎಲ್ಲರನ್ನು ಆಕರ್ಷಿಸುತ್ತದೆ. ಆದರೆ, ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ ಎಂದರು.ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಹಾಗೂ ಪ.ಪಂ ಉಪಾಧ್ಯಕ್ಷ ರಮೇಶ ಮಸಿಬಿನಾಳ ಮಾತನಾಡಿ, ಸಮಾಜದ ಅಂಕುಡೊಂಕನ್ನು ತಿದ್ದುವ ಪತ್ರಿಕೆಗಳು ಇಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಪರಿಸರ ಸ್ನೇಹಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಅಭಿನಂದನೀಯ ಸಂಗತಿ ತಾಲೂಕು ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಹಾಗೂ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ವಿ.ಕೆ.ಪಾಟೀಲರ ಸಹಕಾರ ನಮ್ಮ ಇಲಾಖೆಗೆ ಯಾವಾಗಲೂ ಇರುತ್ತದೆ ಎಂದರು.ವಲಯ ಅರಣ್ಯ ಅಧಿಕಾರಿ ರಾಜು ಬಿರಾದಾರ ಮಾತನಾಡಿ, ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಲ್ಲಿನ ಪ್ರಕೃತಿಯ ಜ್ಞಾನವನ್ನು ಹೊರಗೆಳೆಯಲು ಪರಿಸರ ಸ್ನೇಹಿ ಚಿತ್ರಕಲೆ ಆಯೋಜಿಸಿರುವುದು ಸಂತಸ ತಂದಿದೆ. ಅರಣ್ಯ ಹಾಗೂ ವನ್ಯಜೀವಿಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.ತಾಲೂಕು ಕನ್ನಡಪ್ರಭ ಪತ್ರಿಕೆಯ ಹಿರಿಯ ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲಿ ಒಂದೊಂದು ವಿಶೇಷವಾದ ಕಲೆ ಹುದುಗಿರುತ್ತದೆ. ಆ ಕಲೆಯನ್ನು ಬೆಳಕಿಗೆ ತಂದು ಶೋಭಾಯಮಾನವಾಗಿ ಪ್ರಜ್ವಲಿಸುವಂತೆ ಮಾಡುವುದು ನಮ್ಮೆಲ್ಲರ ಧ್ಯೇಯವಾಗಬೇಕು. ಈ ನಿಟ್ಟಿನಲ್ಲಿ ಕನ್ನಡಪ್ರಭ ಪತ್ರಿಕೆ ತಾಲೂಕಿನಲ್ಲಿ ಯಾವಾಗಲೂ ಮುಂದಿದೆ ಹಾಗೂ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರಿಗೆ ಹಾಗೂ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ವಿ.ಕೆ.ಪಾಟೀಲ ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸಿದರು.ಚಿತ್ರಕಲಾ ಸ್ಪರ್ಧಾ ವಿಜೇತರು:
ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಾದ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪ್ರಮಾಣ ಪತ್ರದ ಜೊತೆ ₹1000 ನಗದು, ದ್ವಿತೀಯ ಬಹುಮಾನ ₹700 ನಗದು ಹಾಗೂ ತೃತೀಯ ಬಹುಮಾನ ₹500 ನಗದು ಪ್ರಶಸ್ತಿ ಪತ್ರವನ್ನು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ತಾಲೂಕಿನ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಬಸವರಾಜ ದೇವಣಗಾಂವ, ಪ್ರಕಾಶ ಡೋಣೂರಮಠ, ಕಾನಿಪ ಸಂಘದ ಅಧ್ಯಕ್ಷ ಸಂಗಮೇಶ ಉತ್ನಾಳ, ಅರಣ್ಯ ಅಧಿಕಾರಿಗಳಾದ ಜಿ.ಬಿ.ರಾಮಗಿರಿಮಠ, ಶಿಕ್ಷಕರಾದ ರಾಜಶೇಖರ ಶೆಟ್ಟಿ ಸೇರಿದಂತೆ ತಾಲೂಕಿನ ಪ್ರೌಢಶಾಲೆಯ ಶಿಕ್ಷಕರು, ಸ್ಥಳೀಯ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಕಸಾಪ ತಾಲೂಕು ಅಧ್ಯಕ್ಷರು ಹಾಗೂ ಶಿಕ್ಷಕ ಜಿ.ಪಿ.ಬಿರಾದಾರ ಅವರು ಸ್ವಾಗತಿಸಿ, ನಿರೂಪಿಸಿದರು. ಸ್ಥಳೀಯ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಬೀಳಗಿ ವಂದಿಸಿದರು.ಪ್ರಶಸ್ತಿ ಪ್ರದಾನ:10ನೇ ತರಗತಿಯ ವಿದ್ಯಾರ್ಥಿಗಳಾದ ಕಾರ್ತಿಕ ಹರಿಜನ(ಪ್ರಥಮ), ಮಲ್ಲಮ್ಮ ನಾಗರಹಳ್ಳಿ (ದ್ವಿತೀಯ), ಭಾಗ್ಯಶ್ರೀ ಮಲ್ಲಿಕಾರ್ಜುನಮಠ (ತೃತೀಯ) ಹಾಗೂ ಸುಮಾರು 30ಕ್ಕೂ ಹೆಚ್ಚು ಪ್ರೌಢಶಾಲೆಯ ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ ಪಡೆದರು.ಸುಮಾರು 80ಕ್ಕೂ ಅಧಿಕ ಮಂದಿ ಭಾಗಿ
-ಜಡಿ ಸಿದ್ದೇಶ್ವರ ಶಿವಾಚಾರ್ಯರು,
-ರಾಜುಗೌಡ ಪಾಟೀಲ ಕುದರಿಸಾಲವಾಡಗಿ,