ಪರ್ಕಳ ಮಂಗಳಕಲಾ ಸಾಹಿತ್ಯ ವೇದಿಕೆಯಿಂದ ಕಲಾ ಕೌಸ್ತುಭ ಸಂಪನ್ನ

KannadaprabhaNewsNetwork |  
Published : May 19, 2026, 02:45 AM IST
18ಮಂಗಳ | Kannada Prabha

ಸಾರಾಂಶ

ಉಡುಪಿ: ಇಲ್ಲಿನ ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆ ಇದರ 23ನೇ ವರ್ಷದ ಸಂಭ್ರಮ ಕಲಾ ಕೌಸ್ತುಭ ಕಾರ್ಯಕ್ರಮ ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು.

ಉಡುಪಿ: ಇಲ್ಲಿನ ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆ ಇದರ 23ನೇ ವರ್ಷದ ಸಂಭ್ರಮ ಕಲಾ ಕೌಸ್ತುಭ ಕಾರ್ಯಕ್ರಮ ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಭಾಗವತರಾದ ಗಣೇಶ್ ಆಚಾರ್ಯ ಬಿಲ್ಲಾಡಿ ಉದ್ಘಾಟಿಸಿ, ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷರಾದ ನಟರಾಜ ಪರ್ಕಳ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಮಂಗಳೂರು ಆಕಾಶವಾಣಿಯ ನಿವೃತ್ತ ಸಹಾಯಕ ನಿರ್ದೇಶಕಿ ಡಾ. ಮಾಲತಿ ಆರ್. ಭಟ್ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಮಣ್ಯ ಜಿ . ಭಟ್ ಕುರಿಯ. ಅಂತರಾಷ್ಟ್ರೀಯ ಮಯೂರಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ವಂದನಾ ರೈ, ಕಾರ್ಕಳ ಡಿಜಿಟಲ್ ಕ್ರಿಯೇಟರ್ ಶಿಕ್ಷಕಿ ಸಂಧ್ಯಾ ಕಾಮತ್ ಆಗಮಿಸಿದ್ದರು.ವೇದಿಕೆಯ ಪೋಷಕರಾದ ಭುವನ ಪ್ರಸಾದ್ ಹೆಗ್ಡೆ ಮಣಿಪಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆ ಸಂಚಾಲಕ ಮಂಜುನಾಥ ಉಪಾಧ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷರಾದ ನಟರಾಜ್ ಪರ್ಕಳ ಸ್ವಾಗತಿಸಿದರು. ಈ ಸಂದರ್ಭ ಸೃಜನಶೀಲ ಛಾಯಾಗ್ರಾಹಕ ನಿಧೀಶ್ ಪರ್ಕಳ ಹಾಗೂ ಗಣಪತಿ ವಿಗ್ರಹ ತಯಾರಿಕ ದೇವರಾಜ್ ನಾಯಕ್ ಸಣ್ಣಕ್ಕಿಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಅಶೋಕ್ ಸಣ್ಣಕ್ಕಿ ಬೆಟ್ಟು ಕಾರ್ಯಕ್ರಮ ನಿರೂಪಿಸಿ, ಶ್ರೀನಿವಾಸ್ ನಾಯಕ್ ಚಕ್ರತೀರ್ಥ ವಂದಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ನಾಟ್ಯ ತಂಡ ಮರ್ಣೆ ಇದರ ಕಲಾವಿದರಿಂದ ದೀಕ್ಷಾ ಗುಂಡುಪಾದೆ ನಿರ್ದೇಶನದಲ್ಲಿ ಧರೆಗಿಳಿದ ಜಗನ್ಮಾತೆ ನೃತ್ಯರೂಪಕ ಹಾಗೂ ಡೆನ್ನಾನ ಕಲಾವಿದರು ಕಾರ್ಕಳ ಇವರಿಂದ ಡೆನ್ನಾನ ನಾಟಕ ಪ್ರದರ್ಶನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯ ರಸ್ತೆಗಳ‌ ಮಳಿಗೆ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ
ಕೋಟ ಪಂಚಶಕ್ತಿ ಸಂಘದಿಂದ ಶಂಕರ ಜಯಂತೋತ್ಸವ