ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಾವೀನ್ಯತಾ ಮಂಡಳಿ ಹಾಗೂ ಐಕ್ಯೂಎಸಿ ಸಂಯುಕ್ತವಾಗಿ ಶನಿವಾರ ಆಯೋಜಿಸಿದ್ದ ಸ್ಮಾರ್ಟ್ ಟೀಚಿಂಗ್: ತರಗತಿಯಲ್ಲಿ ಎಐ ಉಪಕರಣಗಳ ಸಂಯೋಜನೆ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ತಂತ್ರಜ್ಞಾನದೊಂದಿಗೆ ಶಿಕ್ಷಣವು ಗಣನೀಯವಾಗಿ ಬೆಳವಣಿಗೆ ಸಾಧಿಸಿದ್ದು, ಅದರ ಪರಿಣಾಮಕಾರಿತ್ವವನ್ನು ಹೆಚ್ಚಿಸಿದೆ. ಶಿಕ್ಷಣದಲ್ಲಿ ತಂತ್ರಜ್ಞಾನದ ಕೇಂದ್ರೀಯ ಪಾತ್ರದ ಮಹತ್ವ ಹೆಚ್ಚಾಗಿದೆ. ಎಐ ಶಿಕ್ಷಣ ಹಾಗೂ ಸಂಶೋಧನೆ ಎರಡನ್ನೂ ಬೆಂಬಲಿಸಬಹುದು. ದೈನಂದಿನ ಶೈಕ್ಷಣಿಕ ಕಾರ್ಯಗಳಲ್ಲಿ ವಿವಿಧ ಪ್ರಾಯೋಗಿಕ ಎಐ ಉಪಕರಣಗಳನ್ನು ಬಳಸಬಹುದು. ಶಿಕ್ಷಣವನ್ನು ಹೆಚ್ಚು ಆಕರ್ಷಕ ಮತ್ತು ಪರಿಣಾಮಕಾರಿಯಾಗಿಸಲು ಎಐಯನ್ನು ಜವಾಬ್ದಾರಿಯುತ ಮತ್ತು ನೈತಿಕವಾಗಿ ಬಳಸಬೇಕು ಎಂದರು.ಎಸ್ ಜೆಸಿಇ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಎಚ್.ವೈ.ವಾಣಿ ಮಾತನಾಡಿ, ತರಗತಿಗಳಲ್ಲಿ ತಂತ್ರಜ್ಞಾನವನ್ನು ಸೇರಿಸಿಕೊಳ್ಳುವುದು ಮಹತ್ವವಾಗಿದೆ. ಎಐ ಶಿಕ್ಷಣ ಕಲಿಕಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸಲು ಇದನ್ನು ಸರಿಯಾದ ರೀತಿಯಲ್ಲಿ ಬಳಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ, ಐಕ್ಯೂಎಸಿ ಸಂಚಾಲಕ ಎಚ್.ಜಿ. ಪ್ರದೀಪ್, ಸಂಸ್ಥೆಯ ನಾವೀನ್ಯತಾ ಮಂಡಳಿ ಸಂಚಾಲಕರಾದ ಡಾ. ಡುಕನ್ಯ ಇದ್ದರು. ದಿಶಾ ಪ್ರಾರ್ಥಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ಎಸ್. ಶಿಲ್ಪಾ ಸ್ವಾಗತಿಸಿದರು. ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಂ.ಬಿ. ಲಲಿತಾಂಬ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಚ್.ಯು.ಪ್ರೀತಿ ನಿರೂಪಿಸಿದರು.ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಆಗ್ರಹ
ಗಣರಾಜ್ಯೋತ್ಸವ ದಿನದಂದು ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ, ಶಾಲಾ ಕಾಲೇಜುಗಳಲ್ಲಿ ಹಾಗೂ ಖಾಸಗಿ ಬ್ಯಾಂಕ್ ಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಯುವ ಭಾರತ ಸಂಘಟನೆಯ ಸಂಚಾಲಕ ಜೋಗಿ ಮಂಜು ಆಗ್ರಹಿಸಿದ್ದಾರೆ.