ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಗೆ ಬಹುಬೇಡಿಕೆ

KannadaprabhaNewsNetwork |  
Published : Jun 10, 2025, 06:25 AM IST
ಕೃತಕ ಬುದ್ದಿಮತ್ತೆಗೆ ಬೇಡಿಕೆ | Kannada Prabha

ಸಾರಾಂಶ

ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಮುಬಾರಕ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಮುಬಾರಕ್‌ ತಿಳಿಸಿದರು.

ನಗರದ ವರದರಾಜ ಚಾರಿಟಬಲ್ ಟ್ರಸ್ಟ್ ವತಿಯಿಂದ ವರದರಾಜ ಪದವಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಗಳಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾ ಸೈನ್ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತುಮಕೂರಿನಲ್ಲಿ ಮೊದಲ ಬಾರಿಗೆ ಬಿಸಿಎ ಪದವಿಗೆ ಎಐಡಿಎಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ ನಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ಒದಗಿಸಲಿದೆ. ಈ ಕೋರ್ಸ್ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಬಗ್ಗೆ ಸಮಗ್ರವಾದ ತಿಳಿವಳಿಕೆಯನ್ನು ನೀಡಲಾಗುತ್ತಿದೆ ಮತ್ತು ಉದ್ಯಮದ ಅಗತ್ಯತೆಗಳಿಗೆ ತಕ್ಕಂತೆ ಅವರನ್ನು ಸಿದ್ಧಗೊಳಿಸುತ್ತದೆ ಎಂದರು.

ವಿದ್ಯಾರ್ಥಿಗಳನ್ನು ಕ್ಯಾಂಪಸ್ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಗಮನಹರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವರುಣ್ ಅಸ್ರಣ್ಣ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜೊತೆ ಜೊತೆಯಲ್ಲಿಯೇ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ ನ ಮೂಲಭೂತ ಅಂಶಗಳನ್ನು ಪರಿಚಯಿಸಲು ಮತ್ತು ಈ ಕ್ಷೇತ್ರಗಳಲ್ಲಿ ಲಭ್ಯವಿರುವ ವೃತ್ತಿ ಅವಕಾಶಗಳ ಬಗ್ಗೆ ತಿಳಿಸಲು ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ಎಐ ತಜ್ಞರಾದ ಪ್ರೊ.ಮೋಹನ್‌ ಶಂಕರ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ ನ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ನೀಡಿದರು.

ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ.ವಿದ್ಯಾರವರು ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ವರ್ಗದವರು, ಸಿಬ್ಬಂದಿ ವರ್ಗ ಮತ್ತು ನೂರಾರು ಬಿಸಿಎ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''