ಉಡುಪಿ: ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ ಅಲೆವೂರು ಗ್ರೂಪ್ ಅವಾರ್ಡ್ ನ್ನು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಅವರಿಗೆ ಪ್ರದಾನ ಮಾಡಲಾಯಿತು.ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದರು.
ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ಡಾ. ಲೀನಾ ಸಿಕ್ವೆರಾ ಮುಖ್ಯ ಅತಿಥಿಯಾಗಿದ್ದರು. ಅಲೆವೂರು ಗ್ರೂಪ್ ಫಾರ್ ಎಜುಕೇಶನ್ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್ ಸುಧೀರ್ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಅಲೆವೂರು ದಿನೇಶ್ ಕಿಣಿ ಸ್ವಾಗತಿಸಿದರು. ಮುಖ್ಯೇಪಾಧ್ಯಾಯಿನಿ ರೂಪಾ ಡಿ. ಕಿಣಿ ಶಾಲಾ ವಾರ್ಷಿಕ ವರದಿ ಮಂಡಿಸಿದರು. ಆಡಳಿತ ಮಂಡಳಿಯ ಕೋಶಾಧಿಕಾರಿ ಅಲೆವೂರು ಹರೀಶ್ ಕಿಣಿ ಮಾನಸಿ ಅವರನ್ನು ಪರಿಚಯಿಸಿದರು. ಶಿಕ್ಷಕಿ ಶ್ರುತಿ ವಂದಿಸಿದರು. ಶಿಕ್ಷಕರಾರ ಸುಹಾಸಿನಿ ನಾರಾಯಣ ಸರಳಾಯ ಹಾಗೂ ಅಭಿಷೇಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಮಟ್ಟದಲ್ಲಿ ವಿಜೇತರಾದ ಹಾಗೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಾಲೆಯ ಕ್ರೀಡಾಳುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.