ಕನ್ನಡಪ್ರಭ ವಾರ್ತೆ, ಭದ್ರಾವತಿ
ನಗರದ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅವರನ್ನು ಆಹ್ವಾನಿಸದೇ ಅವಮಾನಿಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಗೌರವ ಎಂದು ಟೀಕಿಸಿದರು.ತಹಸೀಲ್ದಾರ್ ಕೆ.ಆರ್. ನಾಗರಾಜು ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಬಿ.ಪಿ. ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಪೊಲೀಸ್ ಸಶಸ್ತ್ರ ಮೀಸಲು ಪಡೆ, ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್), ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ-ಕಾಲೇಜುಗಳ ತಂಡಗಳಿಂದ ಪಥ ಸಂಚಲ ನಡೆಯಿತು. ಪೊಲೀಸ್ ಉಪ ನಿರೀಕ್ಷಕ ಶ್ರೀಶೈಲ ಕೆಂಚಣ್ಣನವರು ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿದರು.
- - - -ಡಿ26-ಬಿಡಿವಿಟಿ:ಭದ್ರಾವತಿಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಕೆ.ಆರ್. ನಾಗರಾಜು ಧ್ವಜಾರೋಹಣ ನೆರವೇರಿಸಿದರು. -ಡಿ26-ಬಿಡಿವಿಟಿ(ಎ):