ದುಶ್ಟಟಗಳಿಂದ ದೂರವಿದ್ದು, ಸುಂದರ ಬದುಕನ್ನು ರೂಪಿಸಿಕೊಂಡು ಸಮಾಜದಲ್ಲಿ ಆದರ್ಶ ದಂಪತಿಗಳಾಗಿ ಬಾಳಬೇಕು.
ಭೀಮಾಂಬಿಕಾದೇವಿ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ ಉಚಿತ ಸಾಮೂಹಿಕ ಹಾಗೂ ಧಾರ್ಮಿಕ ಸಮಾರಂಭ ಕಾರ್ಯಕ್ರಮಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ಯಲಬುರ್ಗಾ
ದುಶ್ಟಟಗಳಿಂದ ದೂರವಿದ್ದು, ಸುಂದರ ಬದುಕನ್ನು ರೂಪಿಸಿಕೊಂಡು ಸಮಾಜದಲ್ಲಿ ಆದರ್ಶ ದಂಪತಿಗಳಾಗಿ ಬಾಳಬೇಕು ಎಂದು ಎಂದು ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಹೇಳಿದರು.
ತಾಲೂಕಿನ ದಮ್ಮೂರು ಗ್ರಾಮದಲ್ಲಿ ಸೋಮವಾರ ಭೀಮಾಂಬಿಕಾದೇವಿ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ ಉಚಿತ ಸಾಮೂಹಿಕ ಹಾಗೂ ಧಾರ್ಮಿಕ ಸಮಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೀವನದಲ್ಲಿ ಕಷ್ಟ, ಕಾರ್ಪಣ್ಯಗಳು ಬರುವುದು ಸಹಜ. ಅವುಗಳನ್ನು ನವದಂಪತಿಗಳು ಸಮಾನ ಮನಸ್ಕಾರರಾಗಿ ಅರಿತು, ಬೆರೆತು ಜೀವನ ಸಾಗಿಸಬೇಕು ಎಂದರು.
ತಾಲೂಕಿನ ಕುದರಿಮೊತಿ ಮೈಸೂರು ಮಠದ ವಿಜಯಮಹಾಂತ ಸ್ವಾಮೀಜಿ ಹಾಗೂ ಯಲಬುರ್ಗಾದ ಶ್ರೀಧರ ಮುರುಡಿ ಹಿರೇಮಠದ ಪೀಠಾಧಿಪತಿ ಬಸವಲಿಂಗೇಶ್ವರ ಸ್ವಾಮೀಜಿ ಮತ್ತು ಹಾಲುಮತ ಸಮಾಜದ ತಾಲೂಕಾಧ್ಯಕ್ಷ ವೀರನಗೌಡ ಬಳೂಟಗಿ ಮಾತನಾಡಿ, ಭಕ್ತರಿಂದ ಮಾತ್ರ ಇಂತಹ ಧಾರ್ಮಿಕ ಕಾರ್ಯಕ್ರಮ ನಡೆಯಲು ಸಾಧ್ಯ ಎನ್ನುವುದಕ್ಕೆ ಈ ಗ್ರಾಮದ ಜಾತ್ರೆಯೇ ಸಾಕ್ಷಿ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.