ಕನ್ನಡಪ್ರಭ ವಾರ್ತೆ ಬಾದಾಮಿ
ಪಟ್ಟಣದ ಜಯನಗರದ ನೂತನ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಬಾಲಕಿಯರ ವಸತಿ ನಿಲಯ ಉದ್ಘಾಟಿಸಿ ಮಾತನಾಡಿ, ಶಿಕ್ಷಣ, ಆರೋಗ್ಯ ಸೇರಿದಂತೆ ಜನರಿಗೆ ಅವಶ್ಯಕ ಬೇಡಿಕೆಗಳನ್ನು ಈಡೇರಿಸುವುದು ನನ್ನ ಕರ್ತವ್ಯ. ಈ ಹಿಂದೆ ಕಳೆದ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಪ್ರಜ್ಞಾವಂತ ಪ್ರಜೆಗಳಾಗಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಶಿವು ಹಿರೇಮಠ, ಪುರಸಭೆ ಸದಸ್ಯರಾದ ಗೌರಮ್ಮ ಬೇಲೂರಪ್ಪನವರ, ಶಂಕರ ಕನಕಗಿರಿ, ಮುಖಂಡರಾದ ಅಶೋಕ ಕೋಟನಕರ, ರಜಾಕ್ ರಾಜೂರ, ಭೀಮಸಿ ಕಂಬಾರ, ಬಾಳು ಕಾಗಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ ಮಳ್ಳಿಮಠ, ಮಹಮ್ಮದ ಖಲೀಫ್ ಸೇರಿದಂತೆ ಇತರರು ಹಾಜರಿದ್ದರು.