ಭೂಮಿಯಿರುವ ತನಕ ರಾಮನಗರ ಜಿಲ್ಲೆ ಹೆಸರು ತೆಗೆಯಲು ಸಾಧ್ಯವಿಲ್ಲ - ಎಚ್ ಡಿ ಕುಮಾರಸ್ವಾಮಿ

KannadaprabhaNewsNetwork |  
Published : Jul 27, 2024, 12:50 AM ISTUpdated : Jul 27, 2024, 12:38 PM IST
ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ | Kannada Prabha

ಸಾರಾಂಶ

ರಾಮನಗರ ಜಿಲ್ಲೆಯಿಂದ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

 ಬೆಂಗಳೂರು/ನವದೆಹಲಿ : ‘ರಾಮನಗರ ಜಿಲ್ಲೆಯಿಂದ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ’ ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ಮುಂಬರುವ 2028 ಅಥವಾ ಅದರೊಳಗಾಗಿಯೇ ಆ ಜಿಲ್ಲೆಗೆ ರಾಮನಗರ ಹೆಸರು ಮತ್ತೆ ಬರುತ್ತದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದೂ ಅವರು ತೀಕ್ಷ್ಣವಾಗಿ ಹೇಳಿದ್ದಾರೆ.ಶುಕ್ರವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಟೀಕಿಸಿದರು.

ಯಾವುದೇ ಕಾರಣಕ್ಕೂ ರಾಮನಗರದಿಂದ ರಾಮನ ಹೆಸರನ್ನು ಬೇರ್ಪಡಿಸಲು ಆಗಲ್ಲ. ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭಾ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದರು.ಈ ಸರ್ಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ಹೆಸರು ಬದಲಾವಣೆ ಮಾಡಲು ಹೊರಟವರ ಪಕ್ಷದ ಎಂಎಲ್‌ಸಿ ಇರುವ ಕಡೆ ದಲಿತನ ಕೈ ಕತ್ತರಿಸಿದ್ದಾರೆ.

 ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ. ಹೆಸರು ಬದಲಾಯಿಸಿದರೆ ಅವರ ಪತನ ಶುರುವಾಯಿತು ಎಂದೇ ಲೆಕ್ಕ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಬಿಡಿ ಪುಸ್ತಕ ಹಿಡಿ’ ಅಭಿಯಾನ
ಬಾಗಲಕೋಟೆ ಗಲಭೆಗೆ ಕೇಸರಿ ಪಡೆ ಗರಂ