ಕನ್ನಡಪ್ರಭ ವಾರ್ತೆ ಗುಡಿಬಂಡೆ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜನೆ ಮಾಡಿರುವ 6ನೇ ತಾಲೂಕು ಸಮ್ಮೇಳನದ ಅಧ್ಯಕ್ಷರಾಗಿ ಸ.ನ.ನಾಗೇಂದ್ರ ರವರನ್ನು ಆಯ್ಕೆ ಮಾಡಲಾಗಿದೆ. ಫೆ.12ರಂದು ಸೋಮವಾರ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗುತ್ತದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಪ್ರೆಸ್ ಸುಬ್ಬರಾಯಪ್ಪ ತಿಳಿಸಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಸಾಪ ತಾಲೂಕು ಸಮ್ಮೇಳನ ಅಧ್ಯಕ್ಷರ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆಯಷ್ಟೆ ಸಾಹಿತ್ಯ ಸಮ್ಮೇಳನ ನಡೆಸುವ ನಿಟ್ಟಿನಲ್ಲಿ ಶಾಸಕ ಸುಬ್ಬಾರೆಡ್ಡಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಕರೆದು ಫೆ.21 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಜೊತೆಗೆ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಬಗ್ಗೆ ಸಹ ಚರ್ಚಿಸಲಾಗಿತ್ತು ಎಂದರು.
ಸ.ನ. ನಾಗೇಂದ್ರ ಸಮ್ಮೇಳನಾಧ್ಯಕ್ಷಈ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಿ ಅಧ್ಯಕ್ಷರ ಆಯ್ಕೆ ಮಾಡುವ ಜವಾಬ್ದಾರಿ ಸಮಿತಿಗೆ ನೀಡಲಾಗಿತ್ತು. ಈ ಸಮಿತಿಯಲ್ಲಿರುವವರು ಸರ್ವಾನುಮತದಿಂದ ಪತ್ರಕರ್ತ ಸ.ನ. ನಾಗೇಂದ್ರ ರವರನ್ನು 6ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಸೋಮವಾರ ಸಂಪ್ರದಾಯದಂತೆ ಸ.ನ. ನಾಗೇಂದ್ರ ರವರ ಮನೆಗೆ ತೆರಳಿ ಅಧ್ಯಕ್ಷರನ್ನು ಆಹ್ವಾನಿಸಲಾಗುತ್ತದೆ. ಸಮ್ಮೇಳನವನ್ನು ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಗುವುದು, ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಕೆಲವು ವರ್ಷಗಳಿಂದ ನಿಂತಿದ್ದ ಸಮ್ಮೇಳನಬಳಿಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯ ನಿಮಿತ್ತ ರಚಿಸಿದ ಸಮಿತಿಯ ಅಧ್ಯಕ್ಷ ಜಿ.ಎನ್.ದ್ವಾರಕಾನಾಥನಾಯ್ಡು ಮಾತನಾಡಿ, ಸುಮಾರು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ ಸ.ನ.ನಾಗೇಂದ್ರ ರವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಸುಮಾರು ವರ್ಷಗಳ ಕಾಲ ಕೊರೋನಾ ಹಾಗೂ ಅನುದಾನದ ಕೊರತೆಯಿಂದ ಸಾಹಿತ್ಯ ಸಮ್ಮೇಳನ ನಡೆಸಲು ಆಗಿರಲಿಲ್ಲ. ಆದ್ದರಿಂದ ಈ ಬಾರಿ ಅಧ್ಯಕ್ಷರ ಆಯ್ಕೆ ಕಂಗ್ಗಂಟ್ಟಾಗಿತ್ತು. ಸಾಹಿತ್ಯ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದಂತಹ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಲಾಗಿದೆ. ಯಾವುದೇ ಪಕ್ಷಪಾತವಿಲ್ಲದೇ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದರು.
ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷಗಳು, ವಿವಿಧ ಸಮಿತಿಗಳ ಜವಾಬ್ದಾರಿಗಳ ಬಗ್ಗೆ ಚರ್ಚಿಸಲಾಯಿತು. ಈ ಸಮಯದಲ್ಲಿ ಕಸಾಪ ಪದಾಧಿಕಾರಿಗಳಾದ ಶ್ರೀರಾಮಪ್ಪ, ಅನುರಾಧ ಆನಂದ್, ಬಿ.ಅಮೀರ್ ಜಾನ್, ಅಂಬರೀಶ್, ಬಿ.ಮಂಜುನಾಥ್, ನವೀನ್ ರಾಜ್, ಶ್ರೀನಿವಾಸ್ ಯಾದವ್, ಇಸ್ಮಾಯಿಲ್ ಅಜಾದ್, ವಾಹಿನಿ ಸುರೇಶ್, ನಾರಾಯಣಸ್ವಾಮಿ, ಬುಲೆಟ್ ಶ್ರೀನಿವಾಸ್, ಭಾರತಿರೆಡ್ಡಿ ಸೇರಿದಂತೆ ಹಲವರು ಇದ್ದರು.1.