ಅಂಧತ್ವ ಪ್ರಮಾಣ ಇಳಿಕೆಗೆ ಆಶಾಕಿರಣ ದೃಷ್ಟಿ ಕೇಂದ್ರ ಆರಂಭ: ಡಾ. ಎಲ್‌.ಆರ್‌. ಶಂಕರ ನಾಯ್ಕ

KannadaprabhaNewsNetwork |  
Published : Jul 06, 2025, 11:48 PM IST
3ಎಚ್‌ಪಿಟಿ5- ಹೊಸಪೇಟೆ ಸರ್ಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆ ಆವರಣದಲ್ಲಿ ನೂತನ ಆಶಾಕಿರಣ ದೃಷ್ಟಿಕೇಂದ್ರವನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಲ್‌.ಆರ್‌. ಶಂಕರ ನಾಯ್ಕ ಉದ್ಘಾಟಿಸಿದರು. | Kannada Prabha

ಸಾರಾಂಶ

ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಿದೆ.

ನೂತನ ಆಶಾಕಿರಣ ದೃಷ್ಟಿಕೇಂದ್ರ ಉದ್ಘಾಟಿಸಿದ ಜಿಲ್ಲಾ ಆರೋಗ್ಯಾಧಿಕಾರಿ

ಕನ್ನಡಪ್ರಭ ವಾರ್ತೆ ಹೊಸಪೇಟೆ

ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ಅಂಧತ್ವ ಪ್ರಮಾಣ ದರವನ್ನು ಇಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಶಾಕಿರಣ ಕಾರ್ಯಕ್ರಮ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಒಟ್ಟು 12 ದೃಷ್ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಲ್‌.ಆರ್‌. ಶಂಕರ ನಾಯ್ಕ ಹೇಳಿದರು.

ನಗರದ ಸರ್ಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆ ಆವರಣದಲ್ಲಿ ನೂತನ ಆಶಾಕಿರಣ ದೃಷ್ಟಿಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರಲ್ಲಿ ಕಣ್ಣಿನ ಪೊರೆ ಮತ್ತು ವಕ್ರೀಕಾರಕ ದೋಷಗಳಿಂದ ದೃಷ್ಟಿ ಸಮಸ್ಯೆಗಳ ಸಂಭವನ್ನು ಕಡಿಮೆ ಮಾಡಲು ಮತ್ತು ದೃಷ್ಟಿ ಕೇಂದ್ರಗಳಲ್ಲಿ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ನಡೆಸುವುದು ಇವುಗಳ ಉದ್ದೇಶವಾಗಿದೆ. ಈಗಾಗಲೇ ತಾಲೂಕಿನ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೂಡ್ಲಿಗಿ, ಹಡಗಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಹಂಪಸಾಗರ, ಇಟಗಿ, ತೆಲಗಿ, ಅರಸೀಕೆರೆ, ಚಿಕ್ಕಜೋಗಿಹಳ್ಳಿ, ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕೆ.ರಾಧಿಕಾ, ಜಿಲ್ಲಾ ಕ್ಷಯರೋಗ ನಿರ್ಮೂಲಾಧಿಕಾರಿ ಡಾ. ಡಿ.ಭಾಸ್ಕರ್, ಮುಖ್ಯ ವೈದ್ಯಾಧಿಕಾರಿ ಡಾ. ಹರಿಪ್ರಸಾದ್, ನೇತ್ರ ತಜ್ಞ ಡಾ. ರಾಜಶೇಖರ್, ಡಾ. ರಾಘವೇಂದ್ರ, ಡಾ. ಕೊಟ್ರೇಶ್, ಜಿಲ್ಲಾ ಕುಷ್ಠರೋಗ ಸಲಹೆಗಾರರು ಮತ್ತು ನೇತ್ರಾಧಿಕಾರಿ ನಜಬುನ್ನಿಸಾ ಬೇಗಂ, ವಾಣಿಶ್ರೀ ಹಾಗೂ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವೆಂಕಟೇಶ್, ಹನುಮಂತರೆಡ್ಡಿ, ಗಿಡ್ಡ ಗಂಗಪ್ಪ, ಗುಂಡಿ ರಾಘು ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು