ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕತೆರ್ಯರ ಪ್ರತಿಭಟನೆ

KannadaprabhaNewsNetwork |  
Published : Oct 10, 2026, 04:00 AM IST
ಫೋಟೊ9ಬಿಕೆಟಿ10- ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ, ಸರ್ಕಾರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಆಶಾ ಕಾರ್ಯಕತೆರ್ಯರ ಪ್ರತಿಭಟನೆ | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನವನಗರದ ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವನಗರದ ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

9 ವರ್ಷಗಳಿಂದ ಆಶಾ ಕಾರ್ಯಕರ್ತೆಯರಿಗೆ ಕೇವಲ ₹1,500 ಮಾತ್ರ ಹೆಚ್ಚಳವಾಗಿದ್ದು, ಬೆಲೆ ಏರಿಕೆಗೆ ತಕ್ಕಂತೆ ವೇತನ ಹೆಚ್ಚಳವಾಗಿಲ್ಲ. ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಹರಿಯಾಣ ಹಾಗೂ ದೆಹಲಿ ಸೇರಿ ವಿವಿಧ ರಾಜ್ಯಗಳಲ್ಲಿ ಮಾಸಿಕ ಸುಮಾರು ₹15,000ಕ್ಕೂ ಅಧಿಕ ಗೌರವಧನ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರ ಸಹ ಕನಿಷ್ಠ ₹15,000 ಗೌರವಧನ ಮತ್ತು ಪ್ರೋತ್ಸಾಹ ಧನ ನಿಗದಿಪಡಿಸಬೇಕು ಪ್ರತಿಭಟನಾಕಾರರು ಒತ್ತಾಯಿಸಿದರು.

ಒಂದು ವರ್ಷದಿಂದ ಪ್ರೋತ್ಸಾಹ ಧನ ಮತ್ತು ಗೌರವಧನ ನಿಗದಿತ ಅವಧಿಯಲ್ಲಿ ಸಿಗದೇ ಕಾರ್ಯಕರ್ತೆಯರು ತೊಂದರೆಯಲ್ಲಿದ್ದಾರೆ. ಕಳೆದ ಹಲವು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನವನ್ನು ತಕ್ಷಣವೇ ಅವರ ಖಾತೆಗಳಿಗೆ ಜಮಾ ಮಾಡಬೇಕೆಂದರು.

ಸೂಕ್ತ ಮೊಬೈಲ್ ಸೌಲಭ್ಯ ನೀಡದೆ, ತಾಂತ್ರಿಕ ತೊಂದರೆಗಳು ಮತ್ತು ಸರ್ವರ್ ಸಮಸ್ಯೆಗಳ ನಡುವೆಯೂ ಆಶಾ ಕಾರ್ಯಕರ್ತೆಯರನ್ನು ಸಮಗ್ರ ಆ್ಯಪ್ ಮೂಲಕ ಕೆಲಸ ಮಾಡಲು ಬಲವಂತವಾಗಿ ಒತ್ತಾಯಿಸಲಾಗುತ್ತಿದೆ. ಆ್ಯಪ್ ಆಧಾರಿತ ಕೆಲಸ ಮಾಡಲು ತಕ್ಷಣವೇ ಸೂಕ್ತ ಮೊಬೈಲ್ ಒದಗಿಸಬೇಕು ಎಂದರು.

ಆಶಾ ಕಾರ್ಯಕರ್ತೆಯರು ನಿರ್ವಹಿಸಿದ ಕೆಲಸಗಳನ್ನು ಕೂಡಲೇ ಪೋರ್ಟಲ್‌ ನಲ್ಲಿ ಎಂಟ್ರಿ ಮಾಡಬೇಕು. ಎಂಟ್ರಿಯಾದ ತಕ್ಷಣವೇ ಕೆಲಸಗಳನ್ನು ವೆರಿಫಿಕೇಶನ್ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಆಶಾಗಳ ಕುಂದು-ಕೊರತೆ ಸಭೆ ನಿಗದಿ ಮಾಡಬೇಕು ಆಗ್ರಹಿಸಿದರು.

ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೇಡಿಕೆ ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್. ಬಿ. ಹಾಗೂ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಎಎಂಎಸ್ ಪರೀಕ್ಷೆಯಲ್ಲಿ ಆರ್‌ಕೆಎಂ ವಿದ್ಯಾರ್ಥಿಗಳ ಸಾಧನೆ
371ಜೆ ಹೋರಾಟಕ್ಕೆ ವಿಜಯೇಂದ್ರ ಬೆಂಬಲ ಭರವಸೆ