ಕನ್ನಡಪ್ರಭ ವಾರ್ತೆ ಜಮಖಂಡಿ
ಮಹಿಳೆಯರಲ್ಲಿ ಶಿಕ್ಷಣ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜಾಗೃತಿ ಬೆಳೆಸುವಲ್ಲಿ ಅವರು ವಿಶೇಷ ಗಮನ ಹರಿಸಿದ್ದಾರೆ. ಆರೋಗ್ಯಮತ್ತು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಹಿಂದುಳಿದ ಸಮುದಾಯಗಳ ಬೆಂಬಲವಾಗಿ ನಿಂತಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಯುವಜನತೆ ಹಾಗೂ ಮಹಿಳೆಯರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ಸಮಾಜ ಸೇವೆಗೆ ಇವರು ನೀಡಿದ ಕೊಡುಗೆಗಳು ಮತ್ತು ಸಾಧನೆಗಳನ್ನು ಪರಿಗಣಿಸಿ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ ಸಮಾರಂಭದಲ್ಲಿ ಡಾಕ್ಟರ್ ಆಫ್ ಲಿಟರೇಚರ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.ವಿಜಯಪುರದ ಅಕ್ಕಮಹದೇವಿ ಮಹಿಳಾ ವಿಶ್ವವಿದ್ಯಾಲಯ ನನ್ನ ಸಮಾಜಸೇವೆ ಹಾಗೂ ಮಹಿಳಾ ಉದ್ಯಮ ಕ್ಷೇತ್ರದಲ್ಲಿನ ಸೇವೆ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿರುವುದು ಹರ್ಷ ತಂದಿದೆ. ಮಹಿಳೆಯರ ಒಳಿತಿಗಾಗಿ ಕೆಲಸ ಮಾಡಬೇಕೆಂಬ ನನ್ನ ಉದ್ದೇಶ ಇಮ್ಮಡಿಯಾಗಿದೆ. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಬೇಕೆನ್ನುವ ನನ್ನ ಭಾವನೆಗೆ ವಿಶ್ವವಿದ್ಯಾಲಯ ಸ್ಫೂರ್ತಿ ನೀಡುವ ಕೆಲಸ ಮಾಡಿದೆ. ಶೋಷಿತರು, ಹಿಂದುಳಿದ ಮಹಿಳೆಯರು, ತುಳಿತಕ್ಕೊಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕೆಂಬ ನಿಟ್ಟನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಗೌರವ ಡಾಕ್ಟರೇಟ್ ಬಂದಿರುವುದು ನನ್ನ ಜವಾಬ್ದಾರಿ ಹೆಚ್ಚಿಸಿದೆ. ಸಮಾಜಕ್ಕಾಗಿ ಇನ್ನಷ್ಟು ಸೇವೆ ಸಲ್ಲಿಸುವ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳವಲ್ಲಿ ಪ್ರೇರಣೆ ನೀಡಿದೆ. ನನ್ನ ಅಳಿಲು ಸೇವೆ ಗುರುತಿಸಿದ ವಿಶ್ವವಿದ್ಯಾಲಯದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ.
- ಆಶಾದೇವಿ ಜಗದೀಶ ಗುಡಗುಂಟಿ ಉದ್ಯಮಿಗಳು ಹಾಗೂ ಸಮಾಜ ಸೇವಕರು ಜಮಖಂಡಿ