ಗದಗ: ಅರ್ಜಿ ವಜಾಗೊಳಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗದಗ ಶಹರ ಪೊಲೀಸ್ ಠಾಣೆಯ ಎಎಸ್‌ಐ ಸಿ.ವಿ. ಇಂಗಳಹಳ್ಳಿ ಬುಧವಾರ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಲಂಚ ನೀಡಲು ಇಚ್ಛಿಸದ ವೀರೇಶ ಅವರು ಈ ಕುರಿತು ಗದಗ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಬುಧವಾರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು.
ದೂರುದಾರರಿಂದ ₹10 ಸಾವಿರ ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಎಎಸ್‌ಐ ಇಂಗಳಹಳ್ಳಿ ಅವರನ್ನು ಹಣದ ಸಮೇತ ದಸ್ತಗಿರಿ ಮಾಡಿದ್ದಾರೆ.ಕಾರ್ಯಾಚರಣೆಯಲ್ಲಿ ಗದಗ ಲೋಕಾಯುಕ್ತ ಡಿಎಸ್‌ಪಿ ವಿಜಯ ಬಿರಾದಾರ, ಪಿಐಗಳಾದ ಪರಮೇಶ ಕವಟಗಿ, ಎಸ್.ಎಸ್. ತೇಲಿ ಹಾಗೂ ಸಿಬ್ಬಂದಿ ಎಂ.ಎಂ. ಅಯ್ಯನಗೌಡ್ರ, ಯು.ಎನ್. ಸಂಗನಾಳ, ನೀಲಕಂಠ ಅಂಬಿಗೇರ ಸೇರಿದಂತೆ ಇತರ ಸಿಬ್ಬಂದಿ ಭಾಗವಹಿಸಿದ್ದರು. ಇಂದು ದತ್ತಿ ನಿಧಿ ಪ್ರಶಸ್ತಿ ಪ್ರದಾನ, ವಿಚಾರಸಂಕಿರಣ
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಅವರು ಕಾನಿಪ ಸಂಸ್ಥಾಪಕ ಅಧ್ಯಕ್ಷ ಡಿ.ವಿ. ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ನೆರವೇರಿಸುವರು. ಕಕಾನಿಪಸಂ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕಕಾಪಸಂ ಜಿಲ್ಲಾಧ್ಯಕ್ಷ ರಾಜು ಎಂ. ಹೆಬ್ಬಳ್ಳಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಇತರರು ಪಾಲ್ಗೊಳ್ಳುವರು ಎಂದು ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪತ್ರಕರ್ತೆ ತನುಜಾ ನಾಯಕ್‌ಗೆ ಪ್ರಶಸ್ತಿ
ಗದಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಲ್ಲಿ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗಂಗವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ರಾಜ್ಯಮಟ್ಟದಲ್ಲಿ ಮಹಿಳಾ ಪತ್ರಕರ್ತರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಥಾಪಿಸಿರುವ ದತ್ತಿ ನಿಧಿಯ 2025ನೇ ಸಾಲಿನ ಪ್ರಶಸ್ತಿಯನ್ನು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಹಿರಿಯ ಉಪಸಂಪಾದಕಿ ತನುಜಾ ನಾಯಕ ಅವರಿಗೆ ಪ್ರದಾನ ಮಾಡಲಾಗುವುದು.