ಕನ್ನಡಪ್ರಭ ವಾರ್ತೆ ಕಾರ್ಕಳ
ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಸಹಯೋಗದೊಂದಿಗೆ ಶನಿವಾರ ಬೈಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿ ಸಾಂಪ್ರದಾಯಿಕ ಶೈಲಿಯ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತಿದ್ದು ತಾಂತ್ರಿಕ ಶೈಲಿಯ ಅಪರಾಧಗಳು ನಡೆಯುತ್ತಿದ್ದು, ಹ್ಯಾಕರ್ಸ್‌ಗಳ ಮೂಲಕ ತಮ್ಮ ಖಾಸಗಿ ಮಾಹಿತಿಗನ್ನು ಕದಿಯಲಾಗುತ್ತಿದೆ. ಸೈಬರ್ ಪ್ರಕರಣಗಳಲ್ಲಿ ನೈಜೀರಿಯಾ ಪ್ರಜೆಗಳೇ ಹೆಚ್ಚು ಭಾಗಿಯಾಗುತಿದ್ದಾರೆ ಎಂದರು.ಪೋಲಿಸ್ ಇಲಾಖೆಗಳು ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುವುದರಿಂದ , ಸೈಬರ್ ಕ್ರೈಂಗಳು ರಾಷ್ಟ್ರೀಯ ಮಟ್ಟಗಳಲ್ಲಿ ಹರಡಿಕೊಂಡಿರುವುದರಿಂದ ಪತ್ತೆಮಾಡಲು ತುಂಬಾ ಸಮಯ ಹಿಡಿಯುತ್ತಿದೆ. ಅದಕ್ಕಾಗಿ ಅಪರಾಧ ತಡೆಯಲು ಅರಿವು ಮೂಡಿಸುವುದೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರಜತ ಮಹೋತ್ಸವ ಸಮಿತಿ ಸಂಚಾಲಕ , ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಮಾತನಾಡಿ ರಾಜ್ಯದಲ್ಲಿ ಶಾಲಾ ಕಾಲೇಜುಗಳೇ ಗಾಂಜಾ ವ್ಯಸನಿಗಳ ಟಾರ್ಗೆಟ್ ಆಗುತಿದ್ದಾರೆ. ಕಾರ್ಕಳ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಲ್ಲ ಸೈಬರ್ ಕ್ರೈಂ ಮಾಹಿತಿ ಹಾಗು ಡ್ರಗ್ಸ್ ಹಾವಳಿ ತಡೆಗಟ್ಟಲು ಮಾಹಿತಿ ಶಿಬಿರಗಳು ನಡೆಯಲಿವೆ ಎಂದರು.
ಲಯನ್ಸ್ ಗವರ್ನರ್ ಲ. ಡಾ. ನೇರಿ ಕರ್ನಾಲಿಯೋ ಬೆಳಕು ಸಂಯೋಜಕರ ಸಂಘಟನೆ ಜಿಲ್ಲಾಧ್ಯಕ್ಷ ಕೆ. ಧರ್ಮರಾಜ್ ಮಾತನಾಡಿದರು. ಜೆ. ಸುಧೀರ್ ಹೆಗ್ಡೆ ಬೈಲೂರು, ಸಂತೋಷ್ ವಾಗ್ಳೆ, ಲಯನ್ಸ್ ಕ್ಲಬ್ ನೀರೆಬೈಲೂರು ಅಧ್ಯಕ್ಷ ಲ.ಕೆ. ಸುಜಯ್ ಜತ್ತನ್ನ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುಮೂರ್ತಿ ಟಿ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಉಪಸ್ಥಿತರಿದ್ದರು. ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಶೆಟ್ಟಿ, ಮಣಿಪಾಲ ಠಾಣಾಧಿಕಾರಿ ದೇವರಾಜ್ ಟಿ.ವಿ., ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತ ವಾಸುದೇವ ಭಟ್ ಸ್ವಾಗತಿಸಿದರು. ಪತ್ರಕರ್ತ ಹರೀಶ್ ಬೈಲೂರು ವಂದಿಸಿದರು.