ಕನ್ನಡಪ್ರಭ ವಾರ್ತೆ ಇಂಡಿ ಇಂಡಿ ನಗರದಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಜನರು ತತ್ತರಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು. ಮುಂಬರುವ ಡಿಸೆಂಬರ್ನಲ್ಲಿ ನಡೆಯಲಿರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು ಹಾಗೂ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ತಿಳಿಸಿದರು.
ಕನ್ನಡಪ್ರಭ ವಾರ್ತೆ ಇಂಡಿ
ಇಂಡಿ ನಗರದಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಜನರು ತತ್ತರಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು. ಮುಂಬರುವ ಡಿಸೆಂಬರ್ನಲ್ಲಿ ನಡೆಯಲಿರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು ಹಾಗೂ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕು ಎಂದು ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ತಿಳಿಸಿದರು.ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಗರದ ಜ್ವಲಂತ ಸಮಸ್ಯೆಯ ಕುರಿತು ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ನೀರಿಲ್ಲದೆ ರೈತರು ಕಬ್ಬು ಸೇರಿದಂತೆ ತಮ್ಮ ಇತರೆ ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಕೇಳಿದಷ್ಟು ಬೆಲೆಯನ್ನು ಕಾರ್ಖಾನೆಗಳು ನೀಡಬೇಕು. ರೈತರನ್ನು ಬದುಕಿಸಬೇಕಿದೆ. ಸಹಕಾರ ಸಚಿವ ಲಕ್ಷ್ಮಣ ಸವದಿಯವರು ಈ ನಿಟ್ಟಿನಲ್ಲಿ ರೈತರ ಪರವಾಗಿ ಸೂಕ್ತ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಮುಖಂಡ ಅನೀಲ ಜಮಾದಾರ ಮಾತನಾಡಿ, ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್ ಒತ್ತಡದಿಂದಾಗಿ ಚುನಾವಣೆಗಳು ನಡೆಯಲಿವೆ. ಆದರೆ, ಸರ್ಕಾರ ಬರಗಾಲದ ನೆಪವೊಡ್ಡಿ ಜಿ.ಪಂ, ತಾ.ಪಂ ಚುನಾವಣೆಯಿಂದ ಹಿಂದೆ ಸರಿಯುತ್ತದೆಯೋ ಗೊತ್ತಿಲ್ಲ. ರೈತರಿಗೆ ಸರ್ಕಾರ ಘೋಷಿಸಿರುವ ₹ ೨೫೦೦ ಪರಿಹಾರಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ವಿಧಿಸಿದೆ. ಈ ಬಗ್ಗೆ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹೆಸ್ಕಾಂ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ತಂತಿ ತುಂಡಾಗಿ ಶಾರ್ಟ್ ಸರ್ಕ್ಯೂಟ್ನಿಂದ ರೈತರ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಕರಕಲಾಗುತ್ತಿದೆ. ಹೆಸ್ಕಾಂನವರು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ಅವರು, ಕಬ್ಬು ಸುಟ್ಟರೂ ಕಾರ್ಖಾನೆಗಳು ಇನ್ನೂ ಆರಂಭವಾಗದ ಕಾರಣ ರೈತರು ಸುಟ್ಟ ಕಬ್ಬನ್ನು ಎಲ್ಲಿಗೆ ಕಳುಹಿಸಬೇಕು. ಮುಂದಿನ ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಲ್ಲಿಕಾರ್ಜುನ ಕಿವಡೆ ಮಾತನಾಡಿ, ಸರ್ಕಾರ ಬರಗಾಲ ಘೋಷಣೆ ಮಾಡಿದೆ. ಆದರೆ, ಅದು ಕಾಗದದ ಮೇಲಷ್ಟೇ ಉಳಿದಿದ್ದು, ಇದರಿಂದ ರೈತರಿಗೆ ಯಾವುದೇ ಅನುಕೂಲವಾಗಿಲ್ಲ. ಸರ್ಕಾರ ನೀಡುವ ಕೇವಲ ₹ ೨೫೦೦ ಪರಿಹಾರದಿಂದ ರೈತರಿಗೆ ಏನೂ ಪ್ರಯೋಜನವಿಲ್ಲ. ಸರ್ಕಾರ ತಕ್ಷಣವೇ ರೈತರಿಗೆ ಸಂಪೂರ್ಣ ಬೆಳೆ ವಿಮೆ ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾಘವೇಂದ್ರ ಕಾಪಸೆ, ಮಂಡಲ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕುಂಬಾರ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.