ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ

KannadaprabhaNewsNetwork | Published : Jan 4, 2024 1:45 AM

ಸಾರಾಂಶ

ಕ್ಲುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದನ್ನು ಖಂಡಿಸಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕ್ಲುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದನ್ನು ಖಂಡಿಸಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಸುಗಂಧಾ ಮೋರೆ ಎಂಬ ಅಂಗನವಾಡಿ ಸಹಾಯಕಿ ಮೇಲೆ ಮಾಡಿದ ಕಲ್ಯಾಣಿ ಮೋರೆ ಎಂಬಾತನ ವಿರುದ್ಧ ಕಾನೂನು ರೀತಿ ಶಿಸ್ತು ಕ್ರಮ ಜರುಗಿಸಬೇಕು. ಈ ಮೂಲಕ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡುವವರಿಗೆ ಸಂದೇಶ ರವಾನೆಯಾಗಬೇಕು. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಹಲ್ಲೆಗೊಳಗಾದ ಅಂಗನವಾಡಿ ಸಹಾಯಕಿ ಸುಂಗಧಾ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ. ಕ್ಲುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿ ಅಟ್ಟಹಾಸ ಮೆರೆದಿದ್ದಾನೆ ಕೊಡಲೇ ಆತನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳು ಇಲ್ಲದೆ ಬಾಡಿಗೆ ಕೇಂದ್ರಗಳಲ್ಲಿ ಮತ್ತು ಇತರೆ ಸಮುದಾಯ ಭವನಗಳಲ್ಲಿ ನಡೆಸಲಾಗುತ್ತಿದೆ. ಆದ್ದರಿಂದ ಇಂತಹ ಅವಘಡಗಳು ಸಂಭವಿಸಲು ಕಾರಣವಾಗಿದೆ. 3ರಿಂದ 6 ವರ್ಷ ವಯಸ್ಸಿನ ಮಕ್ಕಳು ಇರುವಂತಹ ಸ್ಥಳಕ್ಕ ಸುರಕ್ಷತೆಯನ್ನು ಒದಗಿಸಲು ಆವರಣ ಗೋಡೆಯನ್ನು ಕಟ್ಟಬೇಕು. ವ್ಯವಸ್ಥಿತವಾದ ಅಂಗನವಾಡಿಗಳನ್ನು ಕಟ್ಟಲು ತಲಾ ಕಟ್ಟಡಕ್ಕೆ ಕನಿಷ್ಠ ₹15 ಲಕ್ಷ ವೆಚ್ಚ ಮಾಡಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಎಸ್‌.ವರಲಕ್ಷ್ಮೀ, ಎಚ್‌.ಎಸ್‌. ಸುನಂದ, ಜೆ.ಎಂ.ಜೈನೆಖಾನ, ದೊಡ್ಡವ್ವ ಪೂಜಾರಿ, ಗೋದಾವರಿ ರಾಜಾಪೂರೆ, ಚನ್ನಮ್ಮ ಗಡಕರಿ, ಮಂದಾ ನೇವಗಿ, ಮಗದುಮ್ಮ , ಮೀರಾ ಮೋರೆ, ವಂದನಾ ಹೊನಗೇಕರ, ಸುಚಿತಾ, ರೇಣುಕಾ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

Share this article