ವಕೀಲರ ಮೇಲಿನ ಹಲ್ಲೆ: ಕೊಪ್ಪಳದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

KannadaprabhaNewsNetwork |  
Published : Nov 04, 2026, 01:15 AM IST
ಫೋಟೊ ಶೀರ್ಷಿಕೆ: ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ವಕೀಲರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ವಕೀಲರ ಮೇಲಿನ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಕೋರ್ಟ್ ಕಲಾಪ ಬಹಿಷ್ಕರಿಸಿ ಸರ್ಕಾರಕ್ಕೆ ಮನವಿ ಸಲ್ಲಿಕೆಕನ್ನಡಪ್ರಭ ವಾರ್ತೆ ಕೊಪ್ಪಳ

ವಕೀಲರ ಮೇಲಿನ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಆನಂದಳ್ಳಿ ಅವರ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ನೂರಾರು ವಕೀಲರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ವಕೀಲರಾದ ಮಂಜುನಾಥ ಹಾಗೂ ಶ್ರೀರಾಮ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು.

ವಕೀಲರು ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು, ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಕೀಲರ ರಕ್ಷಣೆಗೆ ಇರುವ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ, ಸೂಕ್ತ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿದ್ದರು.

ವಕೀಲರ ಸಂಘದ ಉಪಾಧ್ಯಕ್ಷ ಅಂದಾನಗೌಡರ್, ಪ್ರಧಾನ ಕಾರ್ಯದರ್ಶಿ ಬಿ.ವಿ. ಸಜ್ಜನ್, ಜಂಟಿ ಕಾರ್ಯದರ್ಶಿ ಬಸವರಾಜ, ಖಜಾಂಚಿ ಪುಷ್ಪಾ, ಹಿರಿಯ ವಕೀಲರಾದ ಸಂಧ್ಯಾ ಮಾದಿನೂರ, ಮಾಜಿ ಅಧ್ಯಕ್ಷ ಎ.ವಿ. ಕಣವಿ, ಆಸಿಫ್ ಅಲಿ ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌