ಮಂಡ್ಯ:
ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಬಳಿ ಸೇರಿದ ಕಾರ್ಯಕರ್ತರು, ಪಿಎಸ್‌ಐ ಮೇಲೆ ಹಲ್ಲೆ ನಡೆಸಿದ ಐಶ್ವರ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಆಕೆಯನ್ನು ಬಂಧಿಸುವಂತೆ ಆಗ್ರಹಿಸಿದರು.
ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ನೀಡಿದ್ದರೂ ಈವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಯನ್ನು ಈವರೆವಿಗೂ ಏಕೆ ಬಂಧಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಪ್ರಕರಣದ ತನಿಖೆ ಯಾವ ಹಂತದಲ್ಲಿದೆ. ಘಟನೆ ಸಿಸಿಟಿವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಇತರೆ ಸಾಕ್ಷ್ಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಯಾವುದೇ ರಾಜಕೀಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್‌ಗೌಡ, ಜಲ್ಲಾಧ್ಯಕ್ಷ ಮಲ್ಲೇಶ್, ಮುಖಂಡರಾದ ಮಹಾದೇವಮ್ಮ, ಪ್ರಮೋದ್, ನಾಗರಾಜ್ ಶಿವಪುರ, ಯೋಗೇಶ್, ಅನಿತಾ, ಕೆಂಪಮ್ಮ, ವೆಂಕಟೇಶ್, ಶಾಂತಮ್ಮ, ಶೃತಿ ಇತರರು ಪಾಲ್ಗೊಂಡಿದ್ದರು. ಜಿಪಂ ಎದುರು ಅಹೋರಾತ್ರಿ ಧರಣಿ: ಕೆ.ಟಿ.ಶ್ರೀಕಂಠೇಗೌಡ ಬೆಂಬಲಮಂಡ್ಯ:ನಗರದ ಜಿಪಂ ಆವರಣದಲ್ಲಿ ರೈತ ಮತ್ತು ಪ್ರಗತಿಪರ ಸಂಘಟನೆಗಳ ನಡೆಸುತ್ತಿರುವ ಸಿಇಓ ನಂದಿನಿ ಹಠವೋ ಮಂಡ್ಯ ಜಿಲ್ಲಾ ಪಂಚಾಯ್ತಿ ಬಚಾವೋ ಅಹೋರಾತ್ರಿ ಧರಣಿಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಬೆಂಬಲಿಸಿ ಪಾಲ್ಗೊಂಡರು.
ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲಿಸಿದರು. ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಸಾತನೂರು, ಭ್ರಷ್ಟಾಚಾರ ವಿರೋಧ ವೇದಿಕೆ ರಾಜ್ಯ ಉಪಾಧ್ಯಕ್ಷ ಜಯರಾಮ್, ರೈತ ಸಂಘದ ಕಾರ್ಯದರ್ಶಿ ಆನಂದ್ ಕುಮಾರ್, ರಾಮಲಿಂಗೇಗೌಡ, ಚಾಮರಾಜು,ರುದ್ರೇಶ್, ರಾಣಿ, ಲೀಲಾವತಿ, ಚಲುವಣ್ಣ, ಮರಿಯಪ್ಪ,ಚಿಕ್ಕ ಮರಿಗೌಡ, ಹಲವರು ಇದ್ದರು.